ಚಿಕ್ಕಬಳ್ಳಾಪುರ: ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹರಳಹಳ್ಳಿಯಲ್ಲಿ ತಾಯಿ ಮತ್ತು ಮಗುವಿನ ಶವ ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ.
ಮೃತಪಟ್ಟವರನ್ನು ನವತಾ ಮತ್ತು ಅಂಜನಾ ಗೌಡ ಎಂದು ಗುರುತಿಸಲಾಗಿದೆ.
ತಾಯಿ ಮತ್ತು ಮಗನ ಸಾವಿನ ಕುರಿತಂತೆ ಮೃತರ ಸಂಬಂಧಿಕರು ಪತಿ ವಿರುದ್ಧ ಆರೋಪ ಹೊರಿಸಿದ್ದಾರೆ.
ಪತಿ ನಿರಂತರ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.