ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ
ವಿಜಯಪುರ. ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ರವರ ೪೧ ನೇ ಪುಣ್ಯ ಸ್ಮರಣೆಯನ್ನು ಜಿಲ್ಲಾ ಕಾಂಗ್ರೆಸ್ ಅzಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಎಸ್. ಲೋಣಿ ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾಧ್ಯಕ್ಷರು ಮಾತನಾಡುತ್ತಾ ಭಾರತ ದೇಶದ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಹಾಗೂ ಬಡಜನರ ಸಲುವಾಗಿ ಅಪಾರವಾದ ಯೋಜನೆಗಳ ಮೂಲಕ ಕೋಟ್ಯಂತರ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಕೊಟ್ಟು ಅವರನ್ನು ಸಬಲರನ್ನಾಗಿ ಮಾಡಿದ ಧೀಮಂತ ನಾಯಕಿ ಎಂದು ಗುಣಗಾನ ಮಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಚಾಂದಸಾಬ ಗಡಗಲಾವ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ. ಎಂ. ಮುಲ್ಲಾ (ದ್ಯಾಬೇರಿ), ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಮೀರ ಬಕ್ಷಿ, ಸರಫರಾಜ ಮಿರ್ದೆ, ರಜಾಕಸಾಬ ಕಾಖಂಡಗಿ, ಅಬೂಬಕರ ಕಂಬಾಗಿ, ದಿಲೀಪ ಪ್ರಭಾಕರ, ಜಗದೇವಪ್ಪ ಪಾಟೀಲ ಹೊರ್ತಿ, ವಿದ್ಯಾಧರ ಪಾಟೀಲ, ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.



















