ರಾಷ್ಟ್ರೀಯ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕುರಿತು ಜಾಗೃತಿ ಕಾರ್ಯಕ್ರಮ
ವರದಿ : ಬಸವರಾಜ ಕುಂಬಾರ ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಣ ಮಾಡುವುದು ಬಹಳ ಮುಖ್ಯವಾಗಿರುತ್ತದೆ ಎಂದು ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತ ನಿಯಂತ್ರಣ ಅಧಿಕಾರಿಗಳ ಕಾರ್ಯಾಲಯ ವಿಜಯಪುರ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಪುರಸಭೆ ಕಾರ್ಯಾಲಯ ಮುದ್ದೇಬಿಹಾಳ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಡೆಂಗಿ ದಿನಾಚರಣೆಯನ್ನು ಪುರಸಭೆ ಹಾಗೂ ತಾಲೂಕ ಪಂಚಾಯಿತ್ ಕಾರ್ಯಾಲಯದಲ್ಲಿ ಆಚರಣೆಯನ್ನು ಉದ್ದೇಶಿಸಿ ಅವರ ಮಾತನಾಡಿ, ಮನೆಯಲ್ಲಿರುವ ನೀರಿನ ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ತೊಳೆದು ಪುನ: ನೀರು ತುಂಬಿಸುವುದು ಮನೆಯ ಸುತ್ತ ಮುತ್ತ ಬೀಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಲಾರ್ವ ಸಮೀಕ್ಷೆಗೆ ಮನೆಗೆ ಬಂದಾಗ ಪಟ್ಟಣದ ಜನತೆ ಸಹಕಾರ ನೀಡಿ ಈ ರೋಗ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ನಂತರ ತಾಲೂಕ ಪಂಚಾಯತ ಸಭಾಭವನದಲ್ಲಿ ನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ನಿಂಗಪ್ಪ ಮಸಳಿ ಅವರು ಮಾತನಾಡಿ ಮಳೆಗಾಲ ಪ್ರಾರಂಭವಾಗಿದ್ದು ಕಾರಣ ಸೊಳ್ಳೆಗಳಿಂದ ಹರಡುಬಹುದಾದ ಡೆಂಗ್ಯೂ ಚಿಕುನಗುನ್ಯ ಇನ್ನಿತರ ರೋಗಗಳು ಹೆಚ್ಚಿನ ಪ್ರಮಾಣದಲಿ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಈಗಾಗಲೇ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಂದ ನಿಯಮಿತವಾಗಿ ಈಡಿಸ್ ಲಾರ್ವ ಸಮೀಕ್ಷೆ ಹಾಗೂ ಕುಡಿಯುವ ನೀರಿನ ಮೂಲಗಳಿಂದ ನೀರಿನ ಮಾದರಿಗಳು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಮುನ್ನೆಚ್ಚರಿಕೆಯಾಗಿ ರೋಗಗಳು ಹರಡದಂತೆ ಗ್ರಾಮ ಪಂಚಾಯತಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು. ಎಲ‌್ಲ ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಕೋರಿನೆಷನ್ ಮಾಡಿಸಿ ( ಬೀಚಿಂಗ್ ಪೌಡರ್ ಹಾಕಿಸಿ) ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಗ್ರಾಮಗಳಲ್ಲಿ .. ನೀರು ನಿಲ್ಲದಂತೆ ಸೊಳ್ಳೆಗಳ ನಿಯಂತ್ರಣಕ್ಕೆ ತಗ್ಗು ಗುಂಡಿಗಳನ್ನು ಮುಚ್ಚಿಸಿ ನೀರು ನಿಲ್ಲದಂತೆ ನೋಡಿಕೊಳ್ಳುವುದು.
ನೀರಿನ ಸರಬರಾಜು ಪೈಪಿನಲಿ.. ಸೋರಿಕೆ ಇದ್ದಲ್ಲಿ, ತಕ್ಷಣವೇ ದುರಸ್ತಿ, ಅಥವಾ ಬದಲಾಯಿಸುವುದು ಕುಡಿಯುವ ನೀರಿನ ಸರಬರಾಜುಗಳ ಕನಿಷ್ಠ 100 ಅಡಿ ಸುತ್ತಮುತ್ತಲು ತಿಪ್ಪೆಗುಂಡಿ ಕಸ ಕಡ್ಡಿ, ಹಾಗೂ ವಿಸರ್ಜನೆ ಮಾಡದಂತೆ ಕಡ್ಡಾಯವಾಗಿ ನಿಷೇಧಿಸುವುದು ಸೊಳ್ಳೆಗಳಿಂದ ಹರಡುವ ರೋಗಗಳಾದ ಡೆಂಗ್ಯೂ,ಮಲೇರಿಯ, ಆನೆಕಾಲುರೋಗ,ಚಿಕೂನ್ ಗುನ್ಯಾ ಹರಡದಂತೆ ಗ್ರಾಮದಲ್ಲಿ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪಾಗಿಂಗ್ ವ್ಯವಸ್ಥೆ ಮಾಡುವುದು. ಶುದ್ಧ ನೀರಿನ ಘಟಕಗಳು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳುವುದು, ಒಟ್ಟಾರೆ ಗ್ರಾಮಗಳಲ್ಲಿ , ನೈರ್ಮಲ್ಯವನ್ನು ತೃಪ್ತಿಕರವಾಗಿ ನಿರ್ವಹಿಸಲು ಸಭೆಯಲ್ಲಿ ಪಾಲ್ಗೊಂಡ ಗ್ರಾಮ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯ ತೆರೆದಾಳ ಮಾತನಾಡಿ ಡೆಂಗ್ಯೂ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ದೇಶದಲ್ಲಿ ಪ್ರತಿ ವರ್ಷ ‘ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನ‘ ಎಂದು ಆಚರಿಸಲಾಗುತ್ತದೆ ಈ ವರ್ಷದ ಧೈಯ ವಾಕ್ಯ: ಡೆಂಗಿ ಸೋಲಿಸಲು ಹೆಜ್ಜೆಗಳು: “ಪರಿಶೀಲಿಸಿ,ಸ್ವಚ್ಛಗೊಳಿಸಿ, ಮುಚ್ಚಿಡಿ” ಎಂಬುದಾಗಿರುತ್ತದೆ ಎಂದು ತಿಳಿಸಿದರು
ನಂತರ ಮೇಲ್ವಿಚಾರಕ ಯಲ್ಲಪ್ಪ ಚಲವಾದಿ ಹಾಗೂ ವ್ಹಿ.ಬಿ.ಡಿ ಮೇಲ್ವಿಚಾರಕ ಎಸ್ ಸಿ ರುದ್ರವಾಡಿ ಇವರು ಕಾರ್ಯಕ್ರಮ ಕುರಿತು ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಪುರಸಭೆಯಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆಯನ್ನು ತಾಲೂಕ ಆಸ್ಪತ್ರೆಯ (ಎನ್ ಸಿ ಡಿ) ವಿಭಾಗದ ವೈದ್ಯರಾದ ಡಾ.ಎಚ್ ಎ ಚವ್ಹಾಣ ಹಾಗೂ ಆಪ್ತ ಸಮಾಲೋಚಕ ಎಂ ಎಸ್ ಅಂಬಿಗೇರ ಇವರು ಮಧುಮೇಹ ರಕ್ತ ದೋತ್ತಡ ತಪಾಸಣೆ ಮಾಡಿದರು.
ಕಾರ್ಯಕ್ರಮದಲ್ಲಿ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ ತಾಲೂಕ ಪಂಚಾಯತ್ ಯೋಜನಾಧಿಕಾರಿ ಖುಭಾಸಿಂಗ್ ಜಾದವ್, ತಾ ಪಂ ಎಡಿ ಪಿ ಎಸ್ ಕಸನಕ್ಕಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ
ಡಾ.ಎಂ ಎಂ ಬೆಳಗಲ್ಲ, ಪುರಸಭೆ ಕಾರ್ಯಾಲಯದ ಕಂದಾಯ ಅಧಿಕಾರಿ ಎನ್ ಎಸ್ ಪಾಟೀಲ, ಆರೋಗ್ಯ ನಿರೀಕ್ಷಕ ಮಹಾಂತೇಶ ಕಟ್ಟಿಮನಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭೆಯ ಪೌರಕಾರ್ಮಿಕರು ಆಶಾ ಕಾರ್ಯಕರ್ತೆಯರು ಹಾಜರಿದ್ದರು ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ಗೌಡರ ನೆರವೇರಿಸಿದರು.