ಮುದ್ದೇಬಿಹಾಳ, ತಾಳಿಕೋಟಿ, ನಾಲತವಾಡ ಪ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ಪ್ರಕಟ..!
ವರದಿ : ಬಸವರಾಜ ಈ ಕುಂಬಾರ, ಮುದ್ದೇಬಿಹಾಳ, ವಿಜಯಪುರ ಜಿಲ್ಲೆ.
ಮುದ್ದೇಬಿಹಾಳ : ಒಂದೂವರೆ ವರ್ಷದ ಬಳಿಕ ಮತಕ್ಷೇತ್ರದ ಪಟ್ಟಣದ ಮುದ್ದೇಬಿಹಾಳ, ತಾಳಿಕೋಟಿ ಪುರಸಭೆ ಹಾಗೂ ನಾಲತವಾಡ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ನೀಡಿದ್ದಾರೆ.

ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ತಾಳಿಕೋಟಿ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು ಕಲ್ಪಿಸಲಾಗಿದೆ.

ನಾಲತವಾಡ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ , ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಕಲ್ಪಿಸಿ ಪೌರಾಡಳಿತ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಆದೇಶ ಮಾಡಿದ್ದಾರೆ.




















