ಕಲಬುರಗಿ: ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ನಗರದ ಸಾಯಿ ಮಂದಿರದ ಅಪಾರ್ಟ್ಮೆಂಟ್ ಬಳಿ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ಈರಣ್ಣಗೌಡ ಪಾಟೀಲ್ (40) ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ.
ಜಮೀನು ವಿವಾದ ಸಂಬಂಧಿಸಿದಂತೆ ಸಂಬಧಿಕರಿಂದಲೇ ಹತ್ಯೆ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಕೋರ್ಟ್ಗೆ ಹೋಗುವಾಗ ದುಷ್ಕರ್ಮಿಗಳು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಅಟ್ಟಾಡಿಸಿಕೊಂಡು ಇಬ್ಬರು ದುಷ್ಕರ್ಮಿಗಳು ಹೋಗುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿವಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ವರದಿ: ಉಮೇಶ್ ಅಚಲೇರಿ ವೈಸ್ ಆಫ್ ಜನತಾ ಕಲ್ಬುರ್ಗಿ ಜಿಲ್ಲೆ