ನಾಗಠಾಣ: ವಿಶೇಷ ಸಾಧಕ ಮಕ್ಕಳಿಗೆ ಗೌರವ ಸನ್ಮಾನ
ವಿಜಯಪುರ: ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ವಿಜಯಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ವಿಶೇಷ ಸಾಧಕ ಮಕ್ಕಳಿಗೆ ಕೊಡಮಾಡುವ ಜಿಲ್ಲಾ ಮಟ್ಟದ ಕೆಳದಿ ಚನ್ನಮ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 1 ನೇ ವರ್ಗದ ವಿದ್ಯಾರ್ಥಿನಿಯರಾದ ಕು.ಅನುಶ್ರೀ ಹಾಗೂ ಕು.ಶ್ರೀನಿಧಿ ಬಂಡೆ ಮತ್ತು ಅರೇಬಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಫಲಕನಾಜ ಶಹರ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಲ್ಲಯಾರೂಢ ಮಠದ ಪ್ರಜ್ಞಾನಂದ ಸ್ವಾಮೀಜಿ, ಗೂಳಪ್ಪ ಪೂಜಾರಿ, ಶರಣಬಸು ಪೂಜಾರಿ, ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ, ನಾಗಠಾಣ ಮತಕ್ಷೇತ್ರದ ಮಾಜಿ ಶಾಸಕ ಎಚ್ ಆರ್ ಆಲಗೂರ, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಅರಕೇರಿ, ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ಗಿರಿಸಾಗರ, ಉಪಾಧ್ಯಕ್ಷ ಬಾಬು ಕತ್ನಳ್ಳಿ, ಸಂಸ್ಥೆಯ ಉಪಾಧ್ಯಕ್ಷೆ ಸುರೇಖಾ ಬಂಡೆ, ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ, ಶಿಕ್ಷಕ ಸಾಹಿತಿ ಸಂತೋಷ ಬಂಡೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.



















