ಯುವ ಮೋರ್ಚಾ ಅಧ್ಯಕ್ಷರಾಗಿ ನಾಗೇಂದ್ರ ಆಯ್ಕೆ
ಹನೂರು : ಮಲೆ ಮಹದೇಶ್ವರ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಬಸಪ್ಪನ ದೊಡ್ಡಿ ಗ್ರಾಮದ ನಾಗೇಂದ್ರ ಅವರು ಆಯ್ಕೆಯಾಗಿದ್ದಾರೆ.
ಭಾರತೀಯ ಜನತಾ ಪಾರ್ಟಿ ಹನೂರು ತಾಲೂಕು ಮಲೆ ಮಹದೇಶ್ವರ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ನಾಗೇಂದ್ರ ಬಸಪ್ಪನ ದೊಡ್ಡಿ ಅವರನ್ನು ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಯುವ ಮೋರ್ಛಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ವೇಳೆ ನೂತನ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆ ಯಾದ ನಾಗೇಂದ್ರ ಮಾತನಾಡಿ ಮಲೆ ಮಹದೇಶ್ವರ ಮಂಡಲದ ಯುವ ಮೋರ್ಚಾ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಜಿಲ್ಲಾ ಅಧ್ಯಕ್ಷರು ಹಾಗೂ ಪಕ್ಷದ ವರಿಷ್ಟರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ಜಿಲ್ಲಾಧ್ಯಕ್ಷರು ಹಾಗೂ ಮಂಡಲ ಅಧ್ಯಕ್ಷರ ಮಾರ್ಗ ದರ್ಶನ ದಂತೆ ಒಗ್ಗಟ್ಟಾಗಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತನ್ನು ನೀಡುತ್ತೇನೆ ಎಂದು ತಿಳಿಸಿದರು.
ವರದಿ:ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ.