ನೂತನ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರ ಸ್ವೀಕಾರ
ವಿಜಯಪುರ,ಡಿ.29: ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ.ಔದ್ರಾಮ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ಡಾ.ಔದ್ರಾಮ ಅವರು 2004ನೇಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು,ಇವರು ಈ ಹಿಂದೆ ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಾಗಿ, ಅಪರ ಜಿಲ್ಲಾಧಿಕಾರಿಯಾಗಿ,ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

















