New Zealand vs South Africa
ICC ODI World Cup 2023 : ಇಂದು ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ಅಗ್ರ ಸ್ಥಾನಕ್ಕಾಗಿ ಪೈಪೋಟಿ..!
Voice of Janata News Desk
ಪುಣೆ (ಮಹಾರಾಷ್ಟ್ರ): ಐಸಿಸಿ ವಿಶ್ವಕಪ್ನಲ್ಲಿ (ICC ODI World Cup 2023) ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ (New Zealand vs South Africa) ತಂಡಗಳು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿವೆ.
ಪುಣೆಯಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ 32ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದು ಅಂದರೆ ನವೆಂಬರ್ 1 ರಂದು ಎರಡು ಬಲಿಷ್ಠ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗುತ್ತಿವೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ಈ ಹಣಾಹಣಿ ನಡೆಯಲಿದೆ.
ನ್ಯೂಜಿಲೆಂಡ್
ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲಥಾಮ್ (ನಾಯಕ), ಗ್ಲೆನ್ ಫಿಲಿಪ್ಸ್, ಜಿಮ್ನಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್, ಟೀಮ್ ಸೌಥಿ.
ದಕ್ಷಿಣ ಆಫ್ರಿಕಾ
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಜಿ, ಲುಂಗಿ ಎನ್ಗಿಡಿ