E-PAPER
25 Nov 2026, 04:41:49 AM|
Gold₹12519/gGold24K ₹12,519/g - 22K ₹11,465/gTap for full detailsWEATHER22°AQI 89WeatherBelagavi · 22° · Clear skyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | State News

ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

ಅಫಜಲಪುರ, ಜು. 20: ಪಟ್ಟಣದ ವಾರ್ಡ್ ನಂ. 17ರ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ಆಗ್ರಹಿಸಿ ವಾರ್ಡ್‌ನ ಮಹಿಳಾ ನಿವಾಸಿಗಳು ಸೋಮವಾರ ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. "ನಮ್ಮ ಓಣಿಗಳಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲ, ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ, ಬೀದಿ ದೀಪಗಳಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ" ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ವಾರ್ಡ್ ನಿವಾಸಿಗಳು ಕೆಲಕಾಲ ಪುರಸಭೆ ಕಚೇರಿಯ ಮುಖ್ಯ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ನಡೆಸಿದರು. ಇದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಕಾಲ ಕಚೇರಿಯೊಳಗೇ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ನಂತರ ಪರಿಸ್ಥಿತಿ ತಿಳಿಯಾಯಿತು.
ಆದರೂ ಪಟ್ಟು ಬಿಡದ ನಿವಾಸಿಗಳು, "ಕಚೇರಿಯಲ್ಲಿ ಕುಳಿತು ಭರವಸೆ ನೀಡುವುದರಿಂದ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ನಮ್ಮ ವಾರ್ಡ್‌ಗೆ ಬಂದು ಸಮಸ್ಯೆಗಳನ್ನು ಕಣ್ಣಾರೆ ನೋಡಿ" ಎಂದು ಅಧಿಕಾರಿಗಳನ್ನು ವಾರ್ಡ್‌ಗೆ ಕರೆದುಕೊಂಡು ಹೋದರು. ಅಲ್ಲಿ ಚರಂಡಿ, ರಸ್ತೆ, ಕುಡಿಯುವ ನೀರು ಹಾಗೂ ಬೀದಿ ದೀಪ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸ್ಥಳದಲ್ಲೇ ತೋರಿಸಿದರು.
ಸ್ಥಳ ಪರಿಶೀಲಿಸಿದ ಅಧಿಕಾರಿಗಳು ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೆ, ಒಂದು ವಾರದೊಳಗೆ ವಾರ್ಡ್‌ನ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಪುರಸಭೆ ಕಚೇರಿ ಎದುರು ಮತ್ತೊಮ್ಮೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ವಾರ್ಡ್ ನಿವಾಸಿಗಳು ಖಡಕ್ ಎಚ್ಚರಿಕೆ ನೀಡಿದರು.
ಅನಿಸಿಕೆ1
"ನಮ್ಮ ಮನೆಯ ಮುಂದೆ ಅನೇಕ ತಿಂಗಳಿಂದ ಚರಂಡಿ ನೀರು ನಿಂತು ಕೆರೆಯಂತಾಗಿದೆ. ಇದರಿಂದ ಸುತ್ತಮುತ್ತ ದುರ್ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಹಲವು ಬಾರಿ ಪುರಸಭೆಗೆ ಮನವಿ ಸಲ್ಲಿಸಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ. ಅಧಿಕಾರಿಗಳು ಇನ್ನು ಮುಂದೆ ನಿರ್ಲಕ್ಷ್ಯ ಮಾಡದೇ ತಕ್ಷಣ ಸಮಸ್ಯೆ ಬಗೆಹರಿಸಬೇಕು."
— ಶಾಂತಾ ಎನ್. ಶಿವಣಗಿ,( ವಾರ್ಡ್ ನಿವಾಸಿ, ಅಫಜಲಪುರ)
ಪ್ರತಿಭಟನೆಯಲ್ಲಿ ಶ್ರೀಮತಿ ಶಾಂತಾ ಶಿವಣಗಿ, ಧಾನು ಪತಾಟೆ, ಶಶಿಕಾಂತ ಶಿವಣಗಿ, ಸಿದ್ದು ರಾಣಿ, ಶಾಂತು ಅಂಜುಟಗಿ, ಶಾಂತುಗೌಡ ಪಾಟೀಲ ಸೊನ್ನ, ಬಸವರಾಜ ಸೇರಿದಂತೆ ವಾರ್ಡ್‌ನ ಅನೇಕ ಮಹಿಳೆಯರು ಹಾಗೂ ನಿವಾಸಿಗಳು ಭಾಗವಹಿಸಿದ್ದರು.
.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ