E-PAPER
25 Nov 2026, 01:19:08 AM|
Gold₹12519/gGold24K ₹12,519/g - 22K ₹11,465/gTap for full detailsWEATHER25°AQI 99WeatherBelagavi · 25° · Mainly clearTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಇಂಡಿಯಲ್ಲಿ ಸಂಸ್ಕೃತಿ ಸೌರಭ ಕಾರ್ಯಕ್ರಮ

ಸಂಸ್ಕೃತಿ ಸೌರಭ ಕಾರ್ಯಕ್ರಮ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ಜ್ಞಾನ,ಮೌಲ್ಯ ಅವಶ್ಯ
- ಬಸವಂತರಾಯಗೌಡ ಪಾಟೀಲ

ಇಂಡಿ: ವಿದ್ಯಾರ್ಥಿಗಳ ಕಲಿಕೆಯ ಜೊತೆಗೆ ಜೀವನ
ರೂಪಿಸುವಲ್ಲಿ ಶಿಕ್ಷಕರು ಮಹತ್ವದ ಪ್ರಭಾವ ಬೀರುತ್ತಾರೆ. ಅವರು ಜ್ಞಾನ ಮತ್ತು ಮೌಲ್ಯಗಳನ್ನು ನೀಡಿ, ವಿದ್ಯಾರ್ಥಿಗಳ ಬದುಕನ್ನು ಸಂಸ್ಕಾರಯುತ - ವನ್ನಾಗಿಸುತ್ತಾರೆ ಎಂದು ಶಾಸಕರ ಸಹೋದರ, ಶಿಕ್ಷಣ ಪ್ರೇಮಿ ಬಸವಂತರಾಯಗೌಡ ಪಾಟೀಲ ಹೇಳಿದರು.

ಅವರು ತಾಲೂಕಿನ ಪಡನೂರ ಗ್ರಾಮದ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಶ್ರೀ ವ್ಹಿ ವೈ ಪಾಟೀಲ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ 'ಸಂಸ್ಕೃತಿ ಸೌರಭ'- ಶಾಲಾ ವಾರ್ಷಿಕೋತ್ಸವ ಹಾಗೂ 10ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಉಪನ್ಯಾಸಕರಾಗಿ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ, ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ಜ್ಞಾನ ಪೂರಕ. ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ರೂಢಿಸಿಕೊಳ್ಳಬೇಕು. ವಿದ್ಯಾವಂತರಾಗಲು ಪುಸ್ತಕಗಳನ್ನು ಹೆಚ್ಚಾಗಿ ಓದಬೇಕು. ವಿದ್ಯಾರ್ಥಿಗಳು ಜ್ಞಾನದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಗಳಾಗಿ ಡಾ.ಗುರುಸಿದ್ದಯ್ಯ ಸ್ವಾಮಿ
ಮಾತನಾಡಿ,ಬಡತನದಲ್ಲೇ ಹುಟ್ಟಿ ಬೆಳೆದ ಅಬ್ದುಲ್‌ ಕಲಾಂ, ಅಂಬೇಡ್ಕರ್‌, ಸರ್‌ ಎಂ ವಿಶ್ವೇಶ್ವರಯ್ಯ ಮತ್ತಿತರ ಮಹನೀಯರು ಪರಿಶ್ರಮ ಪಟ್ಟು ಓದಿ ದೇಶಕ್ಕೆ ಕೊಡುಗೆ ನೀಡಿದ್ದಾರೆ. ಅಂತಹ ಸಾಧನೆ ಮಾಡುವ ಶಕ್ತಿ ನಿಮ್ಮಲ್ಲಿದೆ. ಅದಕ್ಕೆ ಸಕಾರಾತ್ಮಕ ಚಿಂತನೆಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಷಡಕ್ಷರಿ ಮೇತ್ರಿ,
ಸಂಸ್ಥೆಯ ಕಾರ್ಯದರ್ಶಿ ಕಲ್ಲನಗೌಡ ಬಿರಾದಾರ, ನಿರ್ದೇಶಕರಾದ ಸೋಮನಿಂಗ ದುದಗಿ, ಅಂಬಣ್ಣ ಬಂಡಿವಡ್ಡರ, ಮುಖಂಡರಾದ ರಾಜು ದುದಗಿ, ಭೀಮಾಶಂಕರ ಭೈರಜಿ, ಕೆ ಆಯ್ ಉಮರಾಣಿ, ಎಸ್ ಎಸ್ ಅವರಾದಿ, ಪ್ರಾಚಾರ್ಯ ಎಲ್ ಟಿ ವೀರಶೆಟ್ಟಿ, ಬಸಪ್ಪಗೌಡ ಬಿರಾದಾರ, ಪಿ ಬಿ ಅರವತ್ತು, ಎಸ್ ಬಿ ಪಾಟೀಲ,ಎಸ್ ಎಸ್ ಪೊದ್ದಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಅಶೋಕ ಮಾಳಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ವ್ಹಿ ಆರ್ ಲಾಳಸೇರಿ, ಅಪ್ಪು ಇಕ್ಕಳಕಿ,ಎ ಬಿ ಬಿರಾದಾರ,ಎ ಬಿ ಚವ್ಹಾಣ, ಸವಿತಾ ಹಳ್ಳೆರ, ಚಿಕ್ಕಯ್ಯ ಮಠಪತಿ,ರವೀಂದ್ರ ಬಿರಾದಾರ ಸೇರಿದಂತೆ
ಅನೇಕರು ಭಾಗವಹಿಸಿದ್ದರು. ವಿವಿಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

 

ವಿದ್ಯಾರ್ಥಿಗಳು ಇಂದು ಹೊಸ ತಂತ್ರಜ್ಞಾನ, ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಅವಶ್ಯಕತೆ ಇದೆ. ಜತೆಗೆ ಪುಸ್ತಕಗಳನ್ನು ಓದುವುದರ ಕಡೆಗೆ ಹೆಚ್ಚು ಗಮನ ಹರಿಸಬೇಕು. ಬಸವಂತರಾಯಗೌಡ ಪಾಟೀಲ ಶಿಕ್ಷಣ ಪ್ರೇಮಿ, ಪಡನೂರ

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ