E-PAPER
25 Nov 2026, 03:34:17 AM|
Gold₹12215/gGold24K ₹12,215/g - 22K ₹11,197/gTap for full detailsWEATHER23°AQI 92WeatherBelagavi · 23° · Mainly clearTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

 

ಜಿಪಂ ಆವರಣದಲ್ಲಿ ಪರಿಸರ ದಿನಾಚರಣೆ

ವಿಜಯಪುರ, ಜೂನ್ 5 : ಕಳೆದ ವರ್ಷ ಬಿಸಿಲಿನ ತಾಪಕ್ಕೆ ಒಣಗಿದ್ದ ಜಿಲ್ಲಾ ಪಂಚಾಯತಿ ಆವರಣ ಇಂದು ಹಚ್ಚಹಸಿರಿನಿಂದ ಕಂಗೊಳಿಸುತ್ತಿದ್ದು, ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಪ್ರಕೃತಿ ಪ್ರೇಮಿಗಳಿಗೆ ಹೊಸ ಆಶಾಭಾವನೆ ಮೂಡಿಸಿದೆ. ನಿರಂತರ ಹಸಿರೀಕರಣ ಕಾರ್ಯಗಳ ಫಲವಾಗಿ ರೂಪುಗೊಂಡಿರುವ ಈ ಪರಿಸರದಲ್ಲಿ ಇಂದು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಹಾಗೂ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ಅವರ ನೇತೃತ್ವದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ನ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು, "ಪ್ರಕೃತಿ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಪರಿಸರ ಸಂರಕ್ಷಣೆಯು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ. ಒಂದು ಸಸಿ ನೆಡುವುದಕ್ಕಿಂತ ಅದನ್ನು ಮರವಾಗಿ ಬೆಳೆಸುವ ಸಂಕಲ್ಪ ಮುಖ್ಯವಾಗಿದೆ. ಹಸಿರು ಪರಿಸರವೇ ಆರೋಗ್ಯಕರ ಸಮಾಜದ ಅಡಿಪಾಯ ಎಂದರು.

ಕಳೆದ ವರ್ಷ ನಮ್ಮ ಜಿಲ್ಲಾ ಪಂಚಾಯತಿ ಆವರಣ ಒಣಗಿದ ಬಯಲು ಪ್ರದೇಶದಂತಿತ್ತು. ಆದರೆ ಇಂದು, ಒಂದು ಸಲ ಕಣ್ಣು ಹಾಯಿಸಿದರೆ ಸಾಕು, ಮಲೆನಾಡಿನ ಸೊಬಗನ್ನು ನೆನಪಿಸುವಂತೆ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಹಸಿರಿನ ಹೊದಿಕೆ ಹೊದ್ದು ಮಲೆನಾಡಿನ ಸೊಬಗನ್ನು ಮೆಲುಕು ಹಾಕುವಂತೆ ನಳನಳಿಸುತ್ತಿದೆ. ಈ ಹಸಿರು ಕ್ರಾಂತಿಯ ಹಿಂದೆ ದೂರದೃಷ್ಟಿಯ ನಾಯಕತ್ವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಗೆ ಸಲ್ಲಬೇಕು ಎಂದರು.

ಸ್ವಚ್ಛ ಶನಿವಾರ ಅಭಿಯಾನದಡಿ ಜಿಲ್ಲಾ ಪಂಚಾಯಿತಿ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕೊಡುಗೆ ಅಪಾರವಾಗಿದೆ ಎಂದ ಅವರು, ಭವಿಷ್ಯದ ದಿನಗಳಲ್ಲೂ
ಹಸಿರು ಬೆಳೆಸೋಣ, ಪ್ರಕೃತಿಯನ್ನು ಉಳಿಸೋಣ... ಮುಂದಿನ ಪೀಳಿಗೆಗೆ ಸುಂದರ ಭವಿಷ್ಯ ಕಟ್ಟೋಣ." ಎಂದರು.

ಜಿ.ಪಂ.ನ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಅವರು ಮಾತನಾಡಿ, ಪರಿಸರ ಉಳಿದರೆ ಮಾತ್ರ ಮಾನವ ಜೀವನ ಸುರಕ್ಷಿತವಾಗಿರಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಜಿ.ಪಂ.ನ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ರವರು ಮಾತನಾಡಿ, "ಕಳೆದ ವರ್ಷದಿಂದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಹಸಿರೀಕರಣಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಅದರ ಪರಿಣಾಮವಾಗಿ ಇಂದು ಆವರಣವು ಹಸಿರು ಸಿರಿಯಿಂದ ಕಂಗೊಳಿಸುತ್ತಿದೆ. ಈ ಬದಲಾವಣೆ ಪರಿಸರದ ಬಗ್ಗೆ ಕಾಳಜಿ ಮತ್ತು ನಿರಂತರ ಪ್ರಯತ್ನಗಳ ಪ್ರತಿಫಲವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಸಿ ನೆಟ್ಟು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು" ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ