E-PAPER
25 Nov 2026, 01:44:07 AM|
Gold₹12519/gGold24K ₹12,519/g - 22K ₹11,465/gTap for full detailsWEATHER24°AQI 97WeatherBelagavi · 24° · Partly cloudyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳೇ ನಮ್ಮ ಶ್ರೀರಕ್ಷೆ: ಶಾಸಕ ಸಿ.ಎಸ್. ನಾಡಗೌಡ

-------

ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

--------

​

ಮಾಜಿ ಶಾಸಕ ನಡಹಳ್ಳಿಯವರು ಮತಕ್ಷೇತ್ರ ಜನರ ಹಾದಿಯನ್ನು ತಪ್ಪಿಸ ಬಾರದು: ಶಾಸಕ ನಾಡಗೌಡ ಕಿವಿ ಮಾತು.

ಮುದ್ದೇಬಿಹಾಳ: ನಮ್ಮ ಸರ್ಕಾರದ ಸಾಧನೆ
ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಮುಂಚೂಣಿ ನಾಯಕರು ಮತ್ತು ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ 1000 ದಿನಗಳ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತಿದ್ದೇವೆ," ಎಂದು ಕೆ.ಎಸ್.ಡಿ.ಎಲ್. ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್. ನಾಡಗೌಡ ಹೇಳಿದರು.
​ಸೋಮವಾರ ಪಟ್ಟಣದ ನಾಡಗೌಡರು ತಮ್ಮ ನಿವಾಸದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
​ಗ್ಯಾರಂಟಿ ಯೋಜನೆಗಳ ಯಶಸ್ಸು ​"ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಯಿತು. ಟೀಕೆ-ಟಿಪ್ಪಣಿಗಳ ನಡುವೆಯೂ ಆರ್ಥಿಕವಾಗಿ ಹಿಂದುಳಿದವರಿಗೆ ನೇರ ನೆರವು ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ನಮ್ಮ ಕ್ಷೇತ್ರದಲ್ಲಿ ಶೇ. 90ಕ್ಕೂ ಹೆಚ್ಚು ಜನ ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ವಿಶೇಷವಾಗಿ ಶೇ. 83ರಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಮಹತ್ವದ ಪ್ರಯೋಜನ ಪಡೆಯುತ್ತಿದ್ದು, ಬಡವರ ಮುಖದಲ್ಲಿ ನಗು ಕಾಣುತ್ತಿದೆ," ಎಂದು ಹರ್ಷ ವ್ಯಕ್ತಪಡಿಸಿದರು.
​ನಡಹಳ್ಳಿ ವಿರುದ್ಧ: ನಾಡಗೌಡ ವಾಗ್ದಾಳಿ.
​ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ಟೀಕೆಗಳಿಗೆ ಉತ್ತರಿಸಿದ ನಾಡಗೌಡರು, "ಮುದ್ದೇಬಿಹಾಳ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ತಂದಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ನಾನು ಕ್ಷೇತ್ರಕ್ಕೆ 700 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ತಂದಿದ್ದೇನೆ. ನಡಹಳ್ಳಿಯವರು ತಮ್ಮ ಅವಧಿಯಲ್ಲಿ ಕುಟುಂಬದವರಿಗೆ, ತಮ್ಮ-ಹಳೆಯ ಮಗನಿಗೆ ಗುತ್ತಿಗೆ ಕೆಲಸಗಳನ್ನು ನೀಡುತ್ತಿದ್ದರು. ಆದರೆ ಈಗಿನ ಆಡಳಿತದಲ್ಲಿ ಅಂತಹ ಪದ್ಧತಿ ಇಲ್ಲ. ಲೇಟರ್‌ಪ್ಯಾಡ್ ದುರ್ಬಳಕೆಯಾಗಬಾರದೆಂದು ನಾನು ನೇರವಾಗಿ ಜನಸಂಪರ್ಕಕ್ಕೆ ಸಿಗುತ್ತಿದ್ದೇನೆ. ಟೀಕೆ ಮಾಡುವುದನ್ನು ಬಿಟ್ಟು ನೈತಿಕ ರಾಜಕಾರಣ ಮಾಡಲಿ," ಎಂದು ತಿರುಗೇಟು ನೀಡಿದರು.
​ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ
​"ನಮ್ಮ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯ ಹೆಸರನ್ನು ಬದಲಿಸಿ, ಕೇಂದ್ರದ ಮೋದಿ ಸರ್ಕಾರ ಬಡವರ ಕೂಲಿಯನ್ನು ನಿಲ್ಲಿಸುತ್ತಿದೆ.
 ನೀರಾವರಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರದಿಂದ ಸರಿಯಾದ ಅನುದಾನ ಸಿಗುತ್ತಿಲ್ಲ.
ಇದು ಉತ್ತರ ಕರ್ನಾಟಕದ ಜನರಿಗೆ ಮಾಡುತ್ತಿರುವ ಅನ್ಯಾಯ," ಎಂದು ಶಾಸಕ ನಾಡಗೌಡ ಆಕ್ರೋಶ ಹೊರಹಾಕಿದರು.
​ಕ್ಷೇತ್ರ ಮೀಸಲಾತಿ ಮತ್ತು ರಾಜಕೀಯ ನಿವೃತ್ತಿ
​ತಮ್ಮ ರಾಜಕೀಯ ನಿವೃತ್ತಿಯ ಬಗ್ಗೆ ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಅವರು, "ನಾನು ಎಂದಿಗೂ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿಲ್ಲ. ಮತಕ್ಷೇತ್ರಗಳ ಪುನರ್ ವಿಂಗಡಣೆಯಾಗಿ ಕ್ಷೇತ್ರ ಮೀಸಲಾತಿ ಬದಲಾದರೆ ಮಾತ್ರ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರ ಬರುತ್ತದೆ ಶಾಸಕ ನಾಡಗೌಡ ಅವರು ಜನರ ಪ್ರೀತಿ ಇರುವವರೆಗೂ ನಾನು ಚುನಾವಣಾ ರಾಜಕಾರಣದಲ್ಲಿ  ಸಕ್ರಿಯನಾಗಿರುತ್ತೇನೆ," ಎಂದು ಸ್ಪಷ್ಟಪಡಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲಾ ಶಾಸಕರು ಒಗಟ್ಟಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ  ಬೇಡಿಕೆ ಇಡೋಣ  ಎಂದರು.
ಈ ಸಂದರ್ಭದಲ್ಲಿ  ತಾಲೂಕು ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪುರಸಭೆನಿಕಟಪೂರ್ವ ಅಧ್ಯಕ್ಷ ಮಹೆಬೂಬು ಗೊಳಸಂಗಿ ಗುತ್ತಿಗೆದಾರ ಸಿ ಬಿ ಅಸ್ಕಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಿ ಕೆ ಬಿರಾದಾರ, ವಾಯ್ ಹೆಚ್ ವಿಜಯಕರ,ಬಾಪುರಾವು ದೇಸಾಯಿ, ಕಾಂಗ್ರೆಸ್  ಎಸ್ ಸಿ ಘಟಕದ ಅಧ್ಯಕ್ಷ ಶ್ರೀಕಾಂತ್ ಚಲವಾದಿ,ಮುತ್ತಣ್ಣ ಮಸೂತಿ,ಸಂತೋಷ ಚವ್ಹಾಣ, ಸರಕಾರಿ ಆಸ್ಪತ್ರೆ ನಾಮನಿರ್ದೇಶನ ಸದಸ್ಯರಾದ ಡಾ! ವಿಜಯಕುಮಾರ ಗೊಳಿ,ಸದು ಮಠ,ರಪೀಕ ಶಿರೋಳ,ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ