E-PAPER
25 Nov 2026, 02:36:54 AM|
Gold₹12519/gGold24K ₹12,519/g - 22K ₹11,465/gTap for full detailsWEATHER24°AQI 95WeatherBelagavi · 24° · Clear skyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿ, ವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ

ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿ,
ವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ, ಮೇ.24 : - ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನಿಯಮಗಳನ್ನು ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.

ಸೋಮವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮತ ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಮತ ಎಣಿಕೆ ಪ್ರಕ್ರೀಯೆ ಜೂನ್ 4ರಂದು ವಿಜಯಪುರ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಮತ ಎಣಿಕೆಗೆ ನಿಯೋಜನೆಗೊಂದಿರುವ ಅಧಿಕಾರಿ ಮತ್ತು ಸಿಬ್ಬಂದಿ ಉತ್ತಮ ರೀತಿಯಲ್ಲಿ ತರಬೇತಿಯನ್ನು ಪಡೆದುಕೊಂಡು ಮತ ಎಣಿಕೆ ಕಾರ್ಯದಲ್ಲಿ ಲೋಪದೋಷಗಳು ಆಗದಂತೆ ನೋಡಿಕೊಳ್ಳಿ ಎಂದರು.

ಅಂದು ಬೆಳಗ್ಗೆ 7 ಗಂಟೆಯ ಒಳಗೆ ತಮಗೆ ನಿಗದಿ ಪಡಿಸಿದ ಮತ ಎಣಿಕೆ ಹಾಲ್‌ನಲ್ಲಿ ಹಾಜರಿರಬೇಕು. ಮತ ಎಣಿಕೆ ಹಾಲ್ ಒಳಗಡೆ ಮೊಬೈಲ್ ನ್ನು ನಿಷೇಧಿಸಲಾಗಿದೆ. ಮತ ಎಣಿಕೆ ಹಾಲ್ ಒಳಗಡೆ ಪೊಲೀಸ್, ಸೆಕ್ಯುರಿಟಿ ಸಿಬ್ಬಂದಿಗಳಿಗೆ ಅನಾವಶ್ಯಕವಾದ ಪ್ರವೇಶವಿರುವುದಿಲ್ಲ. ಅಭ್ಯರ್ಥಿಗಳಲ್ಲದ ಸಚಿವರು, ರಾಜ್ಯ ಸಚಿವರು, ಕೇಂದ್ರ ಸಚಿವರಿಗೆ ಮತ ಎಣಿಕೆ ಹಾಲ್ ಒಳಗಡೆ ಪ್ರವೇಶ ಇರುವುದಿಲ್ಲ ಈ ಕುರಿತು ಮಾಹಿತಿ ತಿಳಿದಿರಲಿ ಎಂದು ಹೇಳಿದರು.

ಮತ ಎಣಿಕೆ ಪ್ರಾರಂಬವಾಗುವ ಮೊದಲು ವಿವಿಪ್ಯಾಟ್ ಆನ್ ಮಾಡುವುದು, ರಿಸಲ್ಟ್ ಬಟನ್ ಪ್ರೆಸ್ ಮಾಡುವುದು ಹಾಗೂ ಅದನ್ನು ಕ್ಲೋಸ್ ಮಾಡುವಾಗ ಬಹು ಎಚ್ಚರಿಕೆಯಿಂದ ತಮಗೆ ವಹಿಸಿದ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸಬೇಕು. ಮತ ಎಣಿಕೆಗೆ ನಿಯೋಜನೆಗೊಂಡ ಏಜೆಂಟ್‌ರ ಬಳಿ ಶಾಂತವಾಗಿ ವರ್ತಿಸಿ, ಅವರಿಗೆ ಏನಾದರೂ ಸಂಶಯಗಳಿದ್ದರೆ ಅವುಗಳನ್ನು ಪರಿಹರಿಸಿರಿ. ಪ್ರತಿ ಇವಿಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿ ಅಂಶಗಳನ್ನು ಬರೆದುಕೊಳ್ಳಬೇಕು. ಇಂದಿನ ತರಬೇತಿ ಅವಧಿಯಲ್ಲಿ ಸ್ಪಷ್ಟವಾದ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಪಡೆದುಕೊಳ್ಳಿ, ಏಕೆಂದರೆ ಮತ ಎಣಿಕೆ ಮೇಲ್ವೀಚಾರಕರ ಜವಾಬ್ದಾರಿ ಬಹು ಮುಖ್ಯವಾಗಿದೆ ಎಂದು ಹೇಳಿದರು.

ಮಾಸ್ಟರ್ ಟ್ರೇನರ್ ಅಶೋಕ ಲಿಮ್ಕಾರ ಅವರು ತರಬೇತಿಗೆ ಆಗಮಿಸಿದ ಸಿಬ್ಬಂದಿಗಳಿಗೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬಹುದಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಅವರು ತರಬೇತಿಗೆ ಆಗಮಿಸಿದ ಸಿಬ್ಬಂದಿಗೆ ಮತ ಎಣಿಕೆಯ ಪ್ರಕ್ರಿಯೆಗಳ ಬಗ್ಗೆ ಇವಿಎಂ ಮಶೀನ್ ಹಾಗೂ ವಿವಿಪ್ಯಾಟ್ ಗಳ ಕಾರ್ಯ ವೈಖರಿ, ಅದನ್ನು ಬಳಸುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಸ್ವತಃ ವಿವಿಪ್ಯಾಟ್‌ನ ಮಾದರಿ ಮತ ಎಣಿಕೆ  ಪ್ರಾತ್ಯಕ್ಷಿಕೆ ಪರೀಕ್ಷೆ‌ ಮಾಡಿದ ಜಿಲ್ಲಾಧಿಕಾರಿ :


ಲೋಕಸಭಾ ಚುನಾವಣೆ – 2024ರ ಮತಎಣಿಕೆ ಪೂರ್ವಸಿದ್ಧತೆ ತರಬೇತಿಯಲ್ಲಿ ಸ್ವತಃ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾದರಿ ವಿವಿಪ್ಯಾಟ್ ನ್ನು ವಿಕ್ಷೀಸಿ ಮತ ಎಣಿಕೆಯ ವಿಧಾನ ಹಾಗೂ ಹಂತಗಳನ್ನು ಪರಿಶೀಲನೆ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ