E-PAPER
25 Nov 2026, 02:01:14 AM|
Gold₹12519/gGold24K ₹12,519/g - 22K ₹11,465/gTap for full detailsWEATHER24°AQI 97WeatherBelagavi · 24° · Partly cloudyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹಿರೇರೂಗಿಯಲ್ಲಿ ರಾಷ್ಟ್ರೀಯ ಧ್ವಜ ಸ್ವೀಕಾರ ದಿನ ಆಚರಣೆ

ಹಿರೇರೂಗಿಯಲ್ಲಿ ರಾಷ್ಟ್ರೀಯ ಧ್ವಜ ಸ್ವೀಕಾರ ದಿನ ಆಚರಣೆ

 

ಇಂಡಿ: ಜುಲೈ 22, ರಾಷ್ಟ್ರೀಯ ಧ್ವಜ ಸ್ವೀಕಾರ ದಿನ. ಈ ನಿಮಿತ್ತ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ರಾಷ್ಟ್ರಧ್ವಜ ಪ್ರದರ್ಶಿಸಿ ಮಕ್ಕಳಿಗೆ ಮಾಹಿತಿಯನ್ನು ನೀಡಲಾಯಿತು.

ಶಿಕ್ಷಕ ಸಂತೋಷ ಬಂಡೆ ಸಮಗ್ರವಾಗಿ ಮಾಹಿತಿ ನೀಡುತ್ತಾ, ನಮ್ಮ ಭಾರತದ ರಾಷ್ಟ್ರೀಯ ಧ್ವಜವು ಮೇಲ್ಭಾಗದಲ್ಲಿ ಕೇಸರಿ, ಮಧ್ಯದಲ್ಲಿ ಬಿಳಿ ಮತ್ತು ಕೆಳಭಾಗದಲ್ಲಿ ಹಸಿರು ಬಣ್ಣ ಹೊಂದಿದ್ದು, ತ್ರಿವರ್ಣ ಧ್ವಜವಾಗಿದೆ. ಬಿಳಿಭಾಗದ ಮಧ್ಯದಲ್ಲಿ ಅಶೋಕ ಚಕ್ರವನ್ನು ಹೊಂದಿದೆ. ರಾಷ್ಟ್ರವನ್ನು ಪ್ರತಿನಿಧಿಸುವ ಭಾರತೀಯ ಧ್ವಜದ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ಜುಲೈ 22 ರಂದು ರಾಷ್ಟ್ರೀಯ ಧ್ವಜ ಸ್ವೀಕಾರ ದಿನವನ್ನು ಆಚರಿಸುತ್ತ ಬರಲಾಗುತ್ತಿದೆ. 1947 ರ ಜುಲೈ 22 ರಂದು ಸಂವಿಧಾನ ಸಭೆಯಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಅಳವಡಿಸಿಕೊಳ್ಳಲಾಯಿತು ಎಂದು ವಿವರಿಸಿದರು.
ಧ್ವಜದಲ್ಲಿರುವ ಕೇಸರಿ ಬಣ್ಣವು ಭಾರತೀಯರ ಧೈರ್ಯ, ತ್ಯಾಗ ಮತ್ತು ಆತ್ಮವನ್ನು ಪ್ರತಿನಿಧಿಸುತ್ತದೆ. ಬಿಳಿ ಬಣ್ಣವು ಶಾಂತಿ, ಸತ್ಯ ಮತ್ತು ಶುದ್ಧತೆಯನ್ನು ಪ್ರತಿನಿಧಿಸುತ್ತದೆ. ಹಸಿರು ಬಣ್ಣವು ಸಮೃದ್ಧಿ, ಬೆಳವಣಿಗೆ ಮತ್ತು ಫಲವತ್ತತೆಯನ್ನು ಪ್ರತಿನಿಧಿಸುತ್ತದೆ. ಅಶೋಕ ಚಕ್ರದ ಕಡ್ಡಿಗಳು ದಿನದ ಇಪ್ಪತ್ನಾಲ್ಕು ಗಂಟೆಗಳನ್ನು ಪ್ರತಿನಿಧಿಸುವುದರಿಂದ ಈ ಚಕ್ರವನ್ನು 'ಸಮಯದ ಚಕ್ರ'ವನ್ನಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದರು.

ಶಿಕ್ಷಕ ಎಸ್ ಎಸ್ ಅರಬ ರಾಷ್ಟ್ರಧ್ವಜದ ಮಹತ್ವವನ್ನು ತಿಳಿಸುತ್ತಾ, ಭಾರತೀಯ ಧ್ವಜವು ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯ ಸಂಕೇತವಾಗಿದೆ. ಇದು ಜನರಿಗೆ ಸ್ಫೂರ್ತಿಯ
ಮೂಲವಾಗಿದೆ. ಇದು ಭಾರತದ ಸ್ವಾತಂತ್ರ್ಯವನ್ನು ಸಾಧಿಸಲು ಮಾಡಿದ ತ್ಯಾಗವನ್ನು ನೆನಪಿಸುತ್ತದೆ. ಇದು ಇತಿಹಾಸ ಮತ್ತು ಸಂಸ್ಕೃತಿಯನ್ನು ನೆನಪಿಸಿ, ಭಾರತಕ್ಕೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಒಟ್ಟಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ ಎಂದು ತಿಳಿಸಿದರು. ಶಿಕ್ಷಕಿ ಎನ್ ಬಿ ಚೌಧರಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ