ಐಸಿಸಿ ವಿಶ್ವಕಪ್ 2023 : ಇಂದು ನ್ಯೂಜಿಲ್ಯಾಂಡ್‌ಗೆ ನೆದರ್ಲೆಂಡ್ಸ್ ಸವಾಲು ಒಡ್ಡುತ್ತಾ..!
Voice of Janata News Desk : ಐಸಿಸಿ ವಿಶ್ವಕಪ್ ೨೦೨೩: ಸೋಮವಾರ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲ್ಯಾಂಡ್ ತಂಡಕ್ಕೆ ನೆದರ್ಲೆಂಡ್ಸ್ ಸವಾಲೆಸೆಯಲು ಸಜ್ಜಾಗಿದೆ.
ಏಕದಿನ ವಿಶ್ವಕಪ್ 2023ರ (ICC ODI World Cup 2023) ಆರನೇ ಪಂದ್ಯದಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ನ್ಯೂಜಿಲೆಂಡ್ ನೆದರ್‌ಲ್ಯಾಂಡ್ಸ್ (New Zealand vs Netherlands) ತಂಡವು ಸವಾಲೆಸೆಯಲು ಸಜ್ಜಾಗಿದೆ.
ಪಂದ್ಯ ಎಲ್ಲಿ..? ಯಾವಾಗ..?
ನ್ಯೂಜಿಲೆಂಡ್ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯವು ಅಕ್ಟೋಬರ್ 9ರ ಸೋಮವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದೆ.
ನ್ಯೂಜಿಲ್ಯಾಂಡ್ ಸಂಭಾವ್ಯ ಆಡುವ ಬಳಗ
ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್/ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.
ನೆದರ್ಲೆಂಡ್ಸ್ ಸಂಭಾವ್ಯ ಆಡುವ ಬಳಗ
ವಿಕ್ರಮ್‌ಜೀತ್ ಸಿಂಗ್, ಮ್ಯಾಕ್ಸ್ ಒ’ಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್, ಸಾಕಿಬ್ ಜುಲ್ಫಿಕರ್, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.