ಸಿಂಧನೂರು: ಮುಕ್ಕುಂದ ಗ್ರಾಮದಲ್ಲಿ ರೈತರ ಸಭೆ ನಡೆಸಿ ಆಮ್ ಆದ್ಮಿ ಪಾರ್ಟಿಯ ಚುನಾವಣಾ ಪ್ರಚಾರದ ಬಗ್ಗೆ ಮಾಹಿತಿ ನೀಡಲಾಯಿತು. ಈ ಪೂರ್ವಭಾವಿ ಸಭೆಯಲ್ಲಿ ರೈತರು, ವಿದ್ಯಾರ್ಥಿಗಳು, ಯುವಕರು ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ಕಟ್ಟಲು ಮುಂದಿನವಾರ ಸಮಾವೇಶ ನಡೆಸಲು ಸಭೆಯಲ್ಲಿ ತಿರ್ಮಾನಿಸಲಾಯಿತು. ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಮತ್ತು ತಾಲೂಕ ಪಂಚಾಯತ್ ಸದಸ್ಯರು ಪಾಲ್ಗೊಂಡಿದ್ದರು.
ಅಲ್ಲದೆ ಮುಂದಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯಿತ್ ಚುನಾವಣೆಗೆ ಅಭ್ಯರ್ಥಿಗಳನ್ನು ಗುರುತು ಮಾಡಲು ತಿಳಿಸಲಾಯಿತು. ಈ ಸಭೆಯಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ, ತಾಲೂಕು ಪ್ರಧಾನ ಕಾರ್ಯದರ್ಶಿ ಪಿ ಹುಲುಗಯ್ಯ ತಿಮ್ಮಪೂರ್, ತಾಲೂಕು ಉಪಾಧ್ಯಕ್ಷ ನಿರುಪಾದೆಪ್ಪ ಅಡ್ಡಿ ಉಪಸ್ಥಿತರಿದ್ದರು.