ಸಿಂಧನೂರು: ನಗರ ಮತ್ತು ತಾಲೂಕಿನಾದ್ಯಂತ ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಅನಾವಶ್ಯಕವಾಗಿ ಜನರು ರಾತ್ರಿ ವೇಳೆ ರಸ್ತೆ ಬರುವದನ್ನು ನಿಲ್ಲಿಸಬೇಕು. ರಾಜ್ಯ ಸರ್ಕಾರದ ಆದೇಶದ ಅನ್ವಯ ಸಂಪೂರ್ಣ ಲಾಕ್ಡೌನ್ ಇರುವುದು. ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಇತರೆ ಯಾವುದೇ ಸೌಲಭ್ಯ ಇರುವುದಿಲ್ಲ. ಇನ್ನು ಹೋಟೆಲ್, ಬಾರ್, ರೆಸ್ಟೋರೆಂಟ್ಗಳಲ್ಲಿ ಪಾರ್ಸಲ್ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ತಾಲೂಕು ದಂಡಾಧಿಕಾರಿ ಮಂಜುನಾಥ ಭೋಗಾವತಿ ಹೇಳಿದರು.