ಸಿಂಧನೂರು : ತಾಲ್ಲೂಕಿನ ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವನನ್ನು ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಯು.ಬೊಮ್ಮನಾಳ ಸೀಮಾಂತರ ಬರುವ ಮಹಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. 35 ವರ್ಷದ ಯಮನೂರಪ್ಪ ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅರಣ್ಯ ಪ್ರದೇಶದ ನಿರ್ಜನ ಪ್ರದೇಶದಲ್ಲಿ ಹರಿತವಾದ ಆಯುಧದಿಂದ ಕುತ್ತಿಗೆ ಕತ್ತರಿಸಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಘಟನೆ ಕಾರಣ ನಿಖರವಾಗಿ ತಿಳಿದು ಬಂದಿಲ್ಲವಾದರೂ, ಮಹಿಳೆ ವಿಚಾರಕ್ಕೆ ಕೊಲೆಯಾಗಿರಬಹುದು ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ತಯರ್ವಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆ ಮಾಡಿರುವ ಹಿನ್ನಲೆಯಲ್ಲಿ ತುರುವಿಹಾಳ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


















