ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ
ಇಂಡಿ: ವಿಜಯಪುರ ಜಿಲ್ಲೆಯಲ್ಲಿ ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ ಕಳಿಸಲಾಗುತ್ತಿದೆ. ಇದರಿಂದ ರೈತರಿಗೆ ಅನ್ಯಾಯವಾಗುವ ಸಾಧ್ಯತೆಯಿದೆ. ಕಾರಣ ಮೇಲಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಇಂಡಿ ತಾಲ್ಲೂಕು ಅಧ್ಯಕ್ಷ ಬಾಳು ಮುಳಜಿ ಆಗ್ರಹಿಸಿದರು.
ಅವರು ಶನಿವಾರ ನಗರದ ಖಾಸಗಿ ಹೋಟೆಲ್ ಆವರಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ವಿಜಯಪೂರ ಜಿಲ್ಲೆಯಲ್ಲಿ ಸಮರ್ಪಕವಾಗಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ನೀಡಿರುವ ವರದಿ ವಾಸ್ತವಿಕ ಪರಿಸ್ಥಿತಿಗೆ ವಿರುದ್ಧವಾಗಿದೆ. ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟದಲ್ಲಿದ್ದರೂ, ಮಳೆಯಾಗಿದೆ ಎಂದು ತಪ್ಪು ವರದಿ ನೀಡಿರುವುದರಿಂದ ರೈತರಿಗೆ ಭಾರೀ ಅನ್ಯಾಯವಾಗುವ ಸಾಧ್ಯತೆ ಇದೆ. ಈ ತಪ್ಪು ವರದಿಯಿಂದ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವ ಪ್ರಕ್ರಿಯೆಗೆ ತೊಂದರೆಯಾಗಬಹುದು. ರೈತರಿಗೆ ದೊರೆಯಬೇಕಾದ ಬರ ಪರಿಹಾರದಿಂದ ವಂಚಿತರಾಗಬಹುದು. ಹವಾಮಾನ ಆಧಾರಿತ ತೋಟಗಾರಿಕೆ ಬೆಳೆಗಳ ವಿಮಾ ಪರಿಹಾರವೂ ಸಿಗದಂತಾಗಬಹುದು.
ರೈತರ ಬೆಳೆ ನಷ್ಟದ ವಾಸ್ತವಿಕ ಪರಿಸ್ಥಿತಿ ಸರ್ಕಾರದ ಗಮನಕ್ಕೆ ಬಾರದಿರುವ ಸಾಧ್ಯತೆ ಆಗುವದು ಎಂದಿದ್ದಾರೆ.
ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಮಾಪನ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ. ಕೆಲವು ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಾಗಿರುವ ಮಳೆ ಪ್ರಮಾಣ ಮತ್ತು ವಾಸ್ತವಿಕವಾಗಿ ಸುರಿದ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸವಿದೆ ಎಂಬುದು ರೈತರ ಆತಂಕಕ್ಕೆ ಕಾರಣವಾಗಿದೆ.
ಆದ್ದರಿಂದ ಜಿಲ್ಲಾಧಿಕಾರಿಗಳು ಕೂಡಲೇ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲೆಯ ಎಲ್ಲಾ ಮಳೆ ಮಾಪನ ಕೇಂದ್ರಗಳ ಕಾರ್ಯವೈಖರಿಯನ್ನು ಪರಿಶೀಲಿಸಬೇಕು. ಅಗತ್ಯವಿದ್ದಲ್ಲಿ ಸ್ಥಳ ಪರಿಶೀಲನೆ ನಡೆಸಿ, ಸ್ವತಂತ್ರವಾಗಿ ನೈಜ ಮಳೆ ಪ್ರಮಾಣದ ಮಾಹಿತಿಯನ್ನು ಸಂಗ್ರಹಿಸಿ, ಅಧಿಕೃತ ಹಾಗೂ ವಾಸ್ತವಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು.
ಜಿಲ್ಲೆಯಲ್ಲಿ ನಿಜವಾಗಿಯೂ ಮಳೆಯ ಕೊರತೆ ಇದ್ದರೆ, ವಾಸ್ತವಿಕ ಅಂಕಿ-ಅAಶಗಳ ಆಧಾರದ ಮೇಲೆ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ದೊರೆಯಬೇಕಾದ ಬರ ಪರಿಹಾರ, ಬೆಳೆ ವಿಮೆ ಹಾಗೂ ಇತರೆ ಸಕರ್uಟಿಜeಜಿiಟಿeಜರಿ ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರೈತರ ಬದುಕಿನೊಂದಿಗೆ ಸಂಬAಧಿಸಿದ ಇಂತಹ ಗಂಭೀರ ವಿಚಾರದಲ್ಲಿ ಯಾವುದೇ ತಪ್ಪು ಅಂಕಿ-ಅAಶಗಳಿAದ ರೈತರಿಗೆ ಅನ್ಯಾಯವಾಗಬಾರದು. ಸಂಬAಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ನೈಜ ಮಳೆ ಪ್ರಮಾಣದ ಅಧಿಕೃತ ವರದಿಯನ್ನು ಬಹಿರಂಗಪಡಿಸಬೇಕು.
ಈ ಕುರಿತು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ, ರೈತರ ಹಿತದೃಷ್ಟಿಯಿಂದ ಶಾಂತಿಯುತ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಹೇಶ ಹೂಗಾರ, ಶಿವಾನಂದ ಚಾಳಿಕಾರ, ಭೀಮನಗೌಡ ಪಾಟೀಲ, ಪ್ರಶಾಂತ ಲಾಳಸಂಗಿ, ಪ್ರವೀಣ ಪೊದ್ದಾರ, ಸಂದೇಶ ಗಲಗಲಿ, ಸಚಿನ್ ನಾವಿ, ಶಿವಾನಂದ ಮಡಿವಾಳ ಸೇರಿದಂತೆ ಇನ್ನಿತರರು ಇದ್ದರು.
ಇಂಡಿ: ಪತ್ರಿಕಾಗೋಷ್ಠಿಯಲ್ಲಿ ಬಾಳು ಮುಳಜಿ ಭಾವಚಿತ್ರ.
ಇಂಡಿ: ಬಾಳು ಮುಳಜಿ ಭಾವಚಿತ್ರ.

















