ಹುನುಗುಂದ ಗಡಿಯಿಂದ ವಿಜಯಪುರವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಹಾಗೂ ಪೂರಕ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸೂಚನೆ
ವಿಜಯಪುರ: ಹುನುಗುಂದ ಗಡಿಯಿಂದ ವಿಜಯಪುರವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಹಾಗೂ ಪೂರಕ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಗಿದ್ದು, ಮಾರ್ಚ್ ತಿಂಗಳಲ್ಲಿ ಈ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹುನಗುಂದ ಗಡಿಯಿಂದ ವಿಜಯಪುರದ ರಾಷ್ಟಿçÃಯ ಹೆದ್ದಾರಿ ಭಾಗದಲ್ಲಿ ಅನೇಕ ತೆಗ್ಗು-ಗುಂಡಿಗಳಿAದಾಗಿ ಸಂಚಾರ ವ್ಯತ್ಯಯವಾಗುತ್ತಿರುವ ಬಗ್ಗೆ ಅನೇಕ ಸಾರ್ವಜನಿಕರು ನನಗೆ ದೂರು ನೀಡಿದ್ದರು. ಈ ದೂರುಗಳನ್ನು ಅತ್ಯಂತ ಗಂಭೀರವಾಗಿ ಸ್ವೀಕರಿಸಿದ ನಾನು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ, ಯೋಜನಾ ನಿರ್ದೇಶಕರು ಹಾಗೂ ಗುತ್ತಿಗೆದಾರರೊಂದಿಗೆ ಸಮಾಲೋಚನಾ ಸಭೆ ನಡೆಸಿ ದುರಸ್ತಿ ಹಾಗೂ ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೇನೆ, ಇದಕ್ಕೆ ಗುತ್ತಿಗೆದಾರರು ಒಪ್ಪಿಕೊಂಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಗೊಳ್ಳಲಿದ್ದು, ಬರುವ ಮಾರ್ಚ್ ಮಾಸಾಂತ್ಯದಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ, ಇದರಿಂದ ಸಂಚಾರ ಮತ್ತಷ್ಟು ಸುಗಮವಾಗಲಿದ್ದು, ಸಾರ್ವಜನಿಕರ ಮಹತ್ವದ ಬೇಡಿಕೆಗೆ ಸ್ಪಂದಿಸಲಾಗಿದೆ, ಆದಷ್ಟು ಬೇಗನೆ ಈ ಕಾಮಗಾರಿ ಕೈಗೊಳ್ಳುವಂತೆ ನಿರ್ದೇಶನ ನೀಡುವೆ ಎಂದರು.
















