NZ vs SL ICC ODI World Cup 2023
ಬೆಂಗಳೂರಿನ : ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯದಲ್ಲಿ ನವೆಂಬರ್ 9ರ ಗುರುವಾರ ನ್ಯೂಜಿಲ್ಯಾಂಡ್ ಮತ್ತು ಶ್ರೀಲಂಕಾ ತಂಡಗಳು ಪೈಪೋಟಿ ನಡೆಸುತ್ತಿವೆ.
ಐಸಿಸಿ ಏಕದಿನ ವಿಶ್ವಕಪ್‌ನ 41ನೇ ಪಂದ್ಯದಲ್ಲಿ ನವೆಂಬರ್ 9ರಂದು ಶ್ರೀಲಂಕಾ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ.
ಮಧ್ಯಾಹ್ನ 2 ಘಂಟೆಗೆ ಪಂದ್ಯ ಪ್ರಾರಂಭವಾಗಿದ್ದು, ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ತಂಡ ನ್ಯೂಜಿಲೆಂಡ್‌ಗೆ 172 ರನ್‌ಗಳ ಗೆಲುವಿನ ಗುರಿ ನೀಡಿದೆ.
ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 46.4 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 171 ರನ್‌ಗಳಿಸಿದೆ.
ನ್ಯೂಜಿಲೆಂಡ್ ಪರ ಬೌಲ್ಟ್ 3, ಲೋಕಿ, ಸಂತ್ನಾರ್, ರವೀಂದ್ರ ತಲಾ ಎರಡು ವಿಕೆಟ್ ಪಡೆದರು. ಶ್ರೀಲಂಕಾದ ಪರ ಕುಶಾಲ್ ಪೆರೆರಾ 51, ಮಹೀಶಾ ತೀಕ್ಷಣ 39 ರನ್ ಗಳಿಸಿ ಗಮನ ಸೆಳೆದರು.
ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ನ್ಯೂಜಿಲೆಂಡ್, ಸೆಮಿಫೈನಲ್ ಪ್ರವೇಶದ ಸಾಧ್ಯತೆ ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯದಲ್ಲಿ ಜಯ ಗಳಿಸುವುದು ಅನಿವಾರ್ಯವಾಗಿದೆ.
ನ್ಯೂಜಿಲ್ಯಾಂಡ್ ಆಡುವ ಬಳಗ
ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲಥಾಮ್ (ನಾಯಕ), ಗ್ಲೆನ್ ಫಿಲಿಪ್ಸ್, ಜಿಮ್ನಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್, ಟೀಮ್ ಸೌಥಿ.
ಶ್ರೀಲಂಕಾ ಆಡುವ ಬಳಗ
ಪಾತುಮ್ ನಿಸ್ಸಾಂಕ, ಕುಸಾಲ್ ಪೆರೆರಾ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್/ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಮಹೀಶ್ ತೀಕ್ಷಣ, ದುಷ್ಮಂತ ಚಮೀರಾ, ಕಸುನ್ ರಜಿತ, ದಿಲ್ಶನ್ ಮಧುಶಂಕ.
ಪಂದ್ಯ: ನ್ಯೂಜಿಲೆಂಡ್ ಮತ್ತು ಶ್ರೀಲಂಕಾ, ಐಸಿಸಿ ಪುರುಷರ ವಿಶ್ವಕಪ್ 2023 41ನೇ ಪಂದ್ಯ
ದಿನಾಂಕ: ನವೆಂಬರ್ 9, 2023 ಗುರುವಾರ
ಸಮಯ: ಮಧ್ಯಾಹ್ನ 2 ಗಂಟೆ (ಭಾರತೀಯ ಕಾಲಮಾನ)
ಸ್ಥಳ: ಎಂ ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು
ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್
ಲೈವ್ ಸ್ಟ್ರೀಮಿಂಗ್: ಡಿಸ್ನಿ+ಹಾಟ್‌ಸ್ಟಾರ್