ಲಿಂಗಸೂಗೂರು: ತಾಲೂಕಿನ ಮುದಗಲ್ ಪಟ್ಟಣದ ಮುಖ್ಯರಸ್ತೆ, ಹಾಗೂ ಮಸ್ಕಿ ರಸ್ತೆಯ ಬೀದಿ ಬದಿ ವ್ಯಾಪಾರಿಗಳಿಂದ ಟ್ರಾಫಿಕ್ ಜಾಮ್ ಸಮಸ್ಯೆಯಾಗಿತ್ತು. ವಾಹನ ಸವಾರರಿಗೆ ಇದರಿಂದಾಗಿ ಕಿರಿಕಿರಿಯಾಗಿತ್ತು.
ಈ ಹಿನ್ನಲೆಯಲ್ಲಿ ಬೆಳ್ಳಂಬೆಳಿಗ್ಗೆ ಟ್ರಾಫಿಕ್ ಕ್ಲೀಯರ್ ಮಾಡಲು ಪುರಸಭೆ ಮುಖ್ಯಾಧಿಕಾರಿ ಹಾಗೂ ಪಿ ಎಸ್ ಐ ಪ್ರಕಾಶ್ ರೆಡ್ಡಿ ಡಂಬಳ್ ಮತ್ತು ಸಿಬ್ಬಂದಿಗಳು ಬೆಳಿಗ್ಗೆ 6 ಗಂಟೆಯಿಂದ ತೆರವು ಕಾರ್ಯಚರಣೆ ಆರಂಭಿಸಿದರು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮರಿಲಿಂಗಪ್ಪ ಮಾತನಾಡಿ, ಮುದಗಲ್ ಪಟ್ಟಣದ ಸಾರ್ವಜನಿಕರ ಅನುಕೂಲಕ್ಕಾಗಿ ಟ್ರಾಫಿಕ್ ಜಾಮ್ ಆಗಬಾರದು ಎನ್ನುವ ದೃಷ್ಟಿಯಿಂದ ತೆರವು ಕಾರ್ಯಚರಣೆ ಮಾಡಲಾಗುತ್ತಿದೆ. ಅಲ್ಲದೆ ಇಲಕಲ್ ದಿಂದ ಲಿಂಗಸೂಗೂರು ರಸ್ತೆ ಮಾರ್ಗವಾಗಿ ಸಂಚರಿಸುವ ಜನರಿಗೆ ಹಾಗೂ ವಾಹನಗಳಿಗೆ ತೊಂದರೆಯಾಗುತ್ತಿತ್ತು. ಇದೀಗ ಸಮಸ್ಯೆಯನ್ನು ಸರಿಮಾಡುವ ವ್ಯವಸ್ಥೆಯನ್ನು ಮಾಡಿದ್ದೇವೆ.
ನಿರಂತರವಾಗಿ ಪುರಸಭೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಂಡಿದ್ದೇವೆ ಇದಕ್ಕೆ ಸಾರ್ವಜನಿಕರು ಕೂಡಾ ಸಹಕರಿಸಬೇಕು ಎಂದರು.