ವಿಜಯಪುರ : ಕ್ಷುಲ್ಲಕ ಕಾರಣಕ್ಕೆ ಓರ್ವನ ಮೇಲೆ ದುಷ್ಕರ್ಮಿಗಳು ಹಲ್ಲೆಗೈದಿರುವ ಘಟನೆ ವಿಜಯಪುರದ ಕಸ್ತೂರಿ ಕಾಲೋನಿಯಲ್ಲಿ ನಡೆದಿದೆ. ಮಿಸ್ಟ್ರಿ ಉಮೇಶ ಹಲ್ಲೆಗೊಳಗಾದವರು. ಇನ್ನೂ ಉಮೇಶ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆಗೈದು ಎಸ್ಕೇಪ್ ಆಗಿದ್ದಾರೆ. ಹಲ್ಲೆಗೊಳಗಾದ ಉಮೇಶ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.