ವಿಜಯಪುರ : ಆನ್ಲೈನ್ ರಮ್ಮಿ ಆಟಕ್ಕೆ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಸಂತೋಷ ಲಾಡ್ಜ್ ನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನಿವಾಸಿ ಅಭಿಷೇಕ ಮಲ್ಲಿಕಾರ್ಜುನ ಗೋಟಕಿಂಡೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿತ್ಯ ಆನ್ಲೈನ್ ರಮ್ಮಿ ಆಟದಲ್ಲಿ ಮಗ್ನರಾಗಿ ಲಕ್ಷಾಂತರ ಹಣ ಸಾಲ ಮಾಡಿಕೊಂಡಿದ್ದಾನೆ. ಇನ್ನು ಹಣ ನೀಡುವಂತೆ ರಮ್ಮಿ ಅಧಿಕಾರಿಗಳು ಅವಾಚ್ಯ ಶಬ್ದದಿಂದ ನಿಂದಿಸಿ ಮಾನಸಿಕ ಕಿರುಕುಳ ಕೊಡುತ್ತಿದ್ದರು. ಅದಕ್ಕಾಗಿ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.