ಇಂಡಿ : ಎತ್ತು ಕಳ್ಳತನಕ್ಕೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕೆಸರಾಳ ತಾಂಡದ ಮೊನಪ್ಪ ನಗರದಲ್ಲಿ ನಡೆದಿದೆ. ಬಾಬು ಮಹಾದೇವ ರಾಠೋಡ ಎಂಬುವರಿಗೆ ಸೇರಿದ ಎತ್ತನ್ನು ಕಳ್ಳರು ಕಳ್ಳತನಕ್ಕೆ ಯತ್ನಿಸಿ, ಒಂದು ಕಿಲೋಮೀಟರ್ ಎಳೆದುಕೊಂಡು ಹೋಗಿದ್ದಾರೆ. ಈ ವೇಳೆಯಲ್ಲಿ ಎತ್ತು ಕಳ್ಳರಿಗೆ ಗುದ್ದಿ ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕಳ್ಳರು ಎತ್ತಿಗೆ ಕಟ್ಟಿಗೆಯಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ. ಇನ್ನು ಎತ್ತು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.