ಬೆಂಗಳೂರು: ಕಾಂಗ್ರೆಸ್ನ ಮೇಕೆದಾಟು ಕಾಮಗಾರಿ ಪಾದಯಾತ್ರೆಗೆ ಆರೋಗ್ಯಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಪಾದಯಾತ್ರೆಯಿಂದ ರಾಜ್ಯಕ್ಕೆ ಮತ್ತಷ್ಟು ಕಂಟಕವಾಗುವ ಸಾಧ್ಯತೆ ಇದೆ ಎಂದು ಆರೋಗ್ಯಾಧಿಕಾರಿಗಳು ಆರೋಗ್ಯ ಸಚಿವ ಡಾ.ಸುಧಾಕರ್ ಜೊತೆ ಚರ್ಚೆ ನಡೆಸಿದರು. ಪಾದಯಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಕರೋನಾ ಸಕ್ರೀಯ ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ದಾಟಿದೆ. ಇದು ಮುಂದುವರೆದರೆ ಕರೋನಾ ಕೇಸಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.