ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ
ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ತಕ್ಕಪಾಠ : ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಾವೀದ ಮೋಮಿನ್
ಇಂಡಿ : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿರುವ ಆಪರೇಶನ ಸಿಂಧೂರ ಉಗ್ರಗಾಮಿಗಳ ನೆಲೆ ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ಸೇನೆಯ ಕಾರ್ಯ ಶ್ಲಾಘನೀಯ ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ತಕ್ಕಪಾಠ ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಪಾಕಿಸ್ತಾನಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆಯಾಗಿದೆ. ಪಾಕಿಸ್ತಾನದ ಭಯೋತ್ಪದನಾ ನೆಲೆಗಳನ್ನು ಸಂಪೂರ್ಣವಾಗಿ ನೆಲಸಮಗೊಳಿಸಬೇಕು ಎಂದು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್ ತಿಳಿಸಿದರು.
ಶನಿವಾರ ಪಟ್ಟಣದಲ್ಲಿ ಪತ್ರಿಕೆಯ ಹೇಳಿದ ನೀಡಿದ ಅವರು, ಭಾರತದ 140 ಕೋಟಿ ಜನತೆ ಭಾರತೀಯರ ಸೈನ್ಯಕ್ಕೆ ಬೆಂಬಲವಾಗಿ ನಿಂತಿದ್ದಾರೆ ಸೈನ್ಯದ ಧೈರ್ಯವೇ ದೇಶದ ಪ್ರತಿ ನಾಗರಿಕನ ನಂಬಿಕೆಯಾಗಿದೆ. ಭಾರತೀಯ ಸೇನೆ ಆಪರೇಶನ ಸಿಂಧೂರ ಮೂಲಕ ತಕ್ಕ ಉತದತರ ನೀಡಿದಕ್ಕಾಗಿ ಅಭಿನಂದನೆ ಸಲ್ಲಿಸುತ್ತಾ ಭಾರತೀಯರು ಶಾಂತಿಯನ್ನು ಬಯಸುತ್ತಾರೆ ಎಂದು ತಿಳಿಸಿದ್ದಾರೆ.


















