ಉಗ್ರರ ಸಾಕುವ ಪಾಪದ ಪಾಕಿಸ್ತಾನಕ್ಕೆ, ಪ್ರತಿ ದಾಳಿ ನಡೆಸಿ ಪಾಠ ಕಲಿಸಬೇಕು : ಅಭಿನವ ಮುರುಘೇಂದ್ರ ಶಿವಾಚಾರ್ಯರು
ಇಂಡಿ: ಉಗ್ರ ಸಂಘಟನೆಯ ದುಷ್ಕರ್ಮಿಗಳು ಹಿಂದೂಗಳನ್ನು ಗುರಿಯಾಗಿಟ್ಟುಕೊಂಡು ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಾಳಿ ವೇಳೆ ಉಗ್ರರು ಪ್ರವಾಸಿಗರ ಧರ್ಮ ಯಾವುದು ಎಂದು ಕೇಳಿ ಗುಂಡಿಕ್ಕಿ ಕೊಂದಿರುವುದು ಅತ್ಯಂತ ಹೇಯ ಕೃತ್ಯವಾಗಿದೆ ಎಂದು ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿ ಅಮಾನುಷವಾಗಿದೆ, ಉಗ್ರರನ್ನು ಸದೆ ಬಡೆಯಲು ನಮ್ಮ ಸೈನ್ಯ ಸನ್ನದ್ಧವಾಗಿದ್ದು ನಮ್ಮ ವೀರ ಯೋಧರಿಗೆ ಭಾರತೀಯರೆಲ್ಲರೂ ಬೆಂಬಲವಾಗಿ ನಿಲ್ಲೋಣ. ಉಗ್ರರ ವಿರುದ್ಧ ನಮ್ಮ ಸೈನಿಕರು ಪ್ರತಿದಾಳಿ ನಡೆಸಿ ತಕ್ಕ ಪಾಠ ಕಲಿಸುವ ವಿಶ್ವಾಸವಿದೆ ಎಂದರು.
ಉಗ್ರರನ್ನು ಸಾಕಿ ಸಲಹುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಆಗಲೇಬೇಕು. ೨೬ ಜನರ ಮಾರಣ ಹೋಮಕ್ಕೆ ಸೈನ್ಯ ಪ್ರತಿಕಾರ ತೀರಿಸಿಕೊಂಡು ಭಾರತೀಯರ ಮೆಚ್ಚುಗೆಗೆ ಪಾತ್ರರಾಗಲಿದೆ ಎಂದ ಶ್ರೀಗಳು ಭಾರತದ ಪ್ರತಿಯೊಬ್ಬ ಪ್ರಜೆಯು ಸೈನಿಕರೊಂದಿಗೆ ಇರೋಣ. ಎಲ್ಲಾ ಪಕ್ಷಗಳು ಕೇಂದ್ರದೊಂದಿಗೆ ಕೈಜೋಡಿಸಿ ಉಗ್ರರನ್ನು ಸದೆ ಬಡಿಯಲು ಪ್ರೋತ್ಸಾಹಿಸಬೇಕು. ನಮ್ಮ ಸೈನಿಕರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಬೇಕು.
ದುಷ್ಕರ್ಮಿಗಳು ಧರ್ಮದ ಹೆಸರಿನಲ್ಲಿ ಅಮಾಯಕ ಮುಗ್ಧ ಜನರನ್ನು ಬಲಿ ತೆಗೆದುಕೊಂಡಿದ್ದು, ಈ ದುಷ್ಕತ್ಯದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕು. ದೇಶದಲ್ಲಿ ಭಯೋತ್ಪಾದನೆಗೆ ಕೃತ್ಯಗಳು ನಿಲ್ಲಬೇಕು ಮತ್ತು ಅಮಾಯಕ ಜೀವಗಳು ಬಲಿಯಾಗುವುದನ್ನು ತಡೆಯಬೇಕು. ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಪಕ್ಷ ಜಾತಿ ಬೇದ ಎಲ್ಲವನ್ನು ಮರೆತು ಈ ನಿಟ್ಟಿನಲ್ಲಿ ಭಯೋತ್ಪಾದಕರ ಹೇಯ ಕೃತ್ಯದ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕು ಎಂದರು.
ಗಡಿಯಲ್ಲಿ ನಮ್ಮ ಸೈನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಆ ಭಗವಂತ ಆಶೀರ್ವಾದ ಕರುಣ ಸಲಿ ಎಂದು ಎಲ್ಲರೂ ಭಗವಂತನಲ್ಲಿ ಪ್ರಾರ್ಥಿಸೋಣ ಎಂದರು.
ಇಂಡಿ: ಶಿರಶ್ಯಾಡದ ಅಭಿನವ ಮುರಘೇಂದ್ರ ಶಿವಾಚಾರ್ಯರ ಭಾವಚಿತ್ರ.




















