ಪೆನ್‌ಡ್ರೈವ್ ಪ್ರಕರಣ : ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ..!
Voice of Janata : ಹಾಸನ : ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ವಿದೇಶದಲ್ಲೊ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬರೋಬ್ಬರಿ ಒಂದು ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು,ಇದೇ ನಾನೇ ಶುಕ್ರವಾರ (ಮೇ 31) ಖುದ್ದಾಗಿ ಎಸ್ ಐಟಿ ಮುಂದೆ ಬಂದು ನಾನು ಉತ್ತರ ಕೊಡುತ್ತೇನೆ. ಸರಿಯಾದ ಉತ್ತರ ಕೊಡುವ ಪ್ರಯತ್ನವನ್ನ ಮಾಡುತ್ತೇನೆ, ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ಈ ಸುಳ್ಳು ಪ್ರಕರಣಗಳಿಂದ ಆಚೆ ಬರುವ ಕೆಲಸವನ್ನ ನಾನು ನ್ಯಾಯಾಲಯದ ಮೂಲಕ ಮಾಡಿಕೊಳ್ಳುತ್ತೇನೆ, ನನ್ನ ಮೇಲೆ ದೇವರ ಆಶೀರ್ವಾದ ಹಾಗೂ ನಾಡಿನ ಜನರ, ಕುಟುಂಬದ ಆಶೀರ್ವಾದವಿರಲಿ. ಎಸ್ ಐಟಿ ಮುಂದೆ ಬಂದು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸುತ್ತೇನೆ ಎಂದು ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ವಿಡಿಯೋದಲ್ಲಿ ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.