ವಿಜಯಪುರ : ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸ್ವಾಮ್ಯದ ಮದ್ಯದ ಮಳಿಗೆ ಆರಂಭಿಸಲು ಮುಂದಾಗಿರುವ ಕ್ರಮ ಖಂಡಿಸಿ ಸಾಲೋಟಗಿ ಗ್ರಾಮ ಪಂಚಾಯತಿ ಸದಸ್ಯರು, ವಿವಿಧ ಸಂಘದವರು ನಗರದ ಡಿಸಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಡಳಿತ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಇನ್ನು ಇಂಡಿ ಶಾಸಕ ಯಶವತಂರಾಯಗೌಡ ಪಾಟೀಲ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜನವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಶಾಲೆ, ಅಂಗನವಾಡಿ ಸ್ಥಾಪಿಸಲು ಮುತುವರ್ಜಿ ತೋರದೆ ಎಂಎಸ್ ಐಎಲ್ ಮಳಿಗೆ ಸ್ಥಾಪಿಸಿ ಗ್ರಾಮೀಣ ಬಡ ಜನರನ್ನು ಹಾಳು ಮಾಡುತ್ತಿದ್ದಾರೆಂದು ಆರೋಪಿಸಿದರು. ಬಳಿಕ ಜಿಲ್ಲಾಡಳಿತಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.