ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ
ವಿಜಯಪುರ,ಆಗಸ್ಟ್ ೨೮ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದÀ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ವಿಜಯಪುರ ತಾಲೂಕಿನ ಕವಲಗಿಯ ಆಂಜನೇಯ ದೇವಸ್ಥಾನದ ಸಭಾ ಭವನದಲ್ಲಿ ಹಾಗೂ ಹೊನ್ನುಟಗಿಯ ಗ್ರಾಮ ಪಂಚಾಯತಿಯ ಆವರಣದಲ್ಲಿ ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಯಿತು.
ಅಭಿಯಾನವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಲಬುರ್ಗಿ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷರಾದÀ ಎಸ್.ಎಲ್.ಚವ್ಹಾಣ ಅವರು ಉದ್ಘಾಟಿಸಿದರು. ಮದಭಾವಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಭಾಗವ್ವ ಮಾದರ ಹಾಗೂ ಹೊನ್ನುಟಗಿಯ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಸಾವಿತ್ರಿ ಶಿವಪ್ಪ ಕೊಳುರ್ಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಲಬುರಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ವಿಜಯ ವಿಠ್ಠಲ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ.ಬಿರಾದಾರ, ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ, ವಿಜಯಪುರ ತಾಲೂಕು ಪಂಚಾಯತಿಯ ಕಾರ್ಯ ನಿರ್ವಹಣಾಧಿಕಾರಿಯಾದ ಬಾಬು ರಾಠೋಡ ಭಾಗವಹಿಸಿದ್ದರು. ವಕೀಲರಾದ ಬಾಬು ಅವತಾಡೆ ಅವರು ಅತಿಥಿ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಸ್ಥರು ಇದ್ದರು



















