ಇಂಡಿ : ರಾಜ್ಯದಲ್ಲಿ ಕುರಿಗಾಯಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಕುರಿಗಾಯಿಗಳಿಗೆ ಭದ್ರತೆಯನ್ನು ನೀಡಬೇಕೆಂದು ಒತ್ತಾಯಿಸಿ ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದಿಂದ ಮಾರ್ಚ್ 22ರಂದು ವಿಧಾನಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಿಂದಗಿ ತಾಲೂಕ ಸಂಗೊಳ್ಳಿ ರಾಯಣ್ಣ ಯುವ ಸಂಘದ ಅಧ್ಯಕ್ಷ ಹನುಮಂತ ಕಾಳೆಯವರು ತಿಳಿಸಿದ್ದಾರೆ. ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕುರಿಗಾಯಿ ಜನರು ಭಾಗವಹಿಸಲಿದ್ದಾರೆ ಎಂದರು.