ಲಿಂಗಸುಗೂರು: ತಾಲೂಕಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ತಾಲೂಕಾ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಯಾವುದೇ ಮಾಹಿತಿ ನೀಡದೆ ಒಕ್ಕೂಟ ರಚನೆಯಾಗಿದೆ. ಈ ಕುರಿತು ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹತ್ತು ವರ್ಷ ಕಳೆದರೂ ಒಕ್ಕೂಟದ ಪಾಧಿಕಾರಿಗಳು ಹಾಗೂ ಅಧ್ಯಕ್ಷರ ಬದಲಾವಣೆಯಾಗಿರುವದಿಲ್ಲ. ತಾಲೂಕಿನ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಬದಲಾವಣೆ ಕುರಿತು ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷರಾದ ಜ್ಯೋತಿ ಸುಂಕದ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಯಾದ ಶರಣಮ್ಮ ಕಾರನೂರ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶೋಭಾ ಕಾಟವಾ, ಜಿಲ್ಲಾ ವಕ್ತಾರರಾದ ನಾಗವೇಣಿ ಪಾಟಿಲ್, ಜಿಲ್ಲಾ ಉಪಾಧ್ಯಕ್ಷರಾದ ಗಿರಿಜಮ್ಮ, ಪಾರ್ವತಿ ಹಾಗೂ ಇನ್ನಿತರ ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.