ವಿಜಯಪುರ : ಎಸ್ ಎಸ್ ಎಲ್ ಸಿ ಎರಡನೇ ಪರೀಕ್ಷೆಗೆ ವಿಜಯಪುರದಲ್ಲಿ ಜಿಲ್ಲಾ ಪೊಲೀಸ ಇಲಾಖೆ ಬೀಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ. ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಬಳಿ ಪೊಲೀಸ ನಿಯೋಜನೆ ಮಾಡಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ಹಾಕಿಕೊಂಡು ವಿದ್ಯಾರ್ಥಿನಿಯರು ಆಗಮಿಸುತ್ತಿದ್ದು, ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸುವ ಮುನ್ನ ಹಿಜಾಬ್ ತೆಗೆದಿಡಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಜಿಲ್ಲಾಡಳಿತದಿಂದ 144 ಜಾರಿಗೆ ಮಾಡಲಾಗಿದೆ.