ವಿಜಯಪುರ : ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ನೂತನ ವಿಜಯಪುರ ಜಿಲ್ಲಾಧಿಕಾರಿಯಾಗಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ್ ನಿಯೋಜನೆ ಆಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಡಿಸಿ ಸುನೀಲಕುಮಾರ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ, ಕೋವಿಡ್ ವೇಳೆಯಲ್ಲಿ ತಮ್ಮ ಜೀವದ ಹಂಗು ತೊರೆದು ಜನತೆಯ ಆರೋಗ್ಯಕ್ಕಾಗಿ ಸೇವೆ ಮಾಡಿದ್ದಾರೆ. ಇನ್ನು ಪಿ. ಸುನೀಲಕುಮಾರ ಅವರಿಗೆ ಸ್ಥಳ ನಿಯೋಜನೆ ಮಾಡದೇ ಸರ್ಕಾರ ವರ್ಗಾವಣೆ ಮಾಡಿದೆ.