ಕಲಬುರಗಿ : ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ರೈತರ ವಿಷಯದಲ್ಲಿ ಪ್ರಧಾನಿ ದುರಹಂಕಾರಿ ಎಂದು ಹೇಳಿರುವುದು ದಾಖಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದು ನಿಜವೇ? ಎಂದು ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ್ ಖರ್ಗೆಯವರು ಟ್ವಿಟರ್‍ನಲ್ಲಿ ಪ್ರಶ್ನಿಸಿದ್ದಾರೆ.
ಇದೇ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹುಚ್ಚ ಎಂದು ಕರೆದಿದ್ದಾರೆ ಎಂದು ಹೇಳಿರುವ ವಿಡಿಯೋವನ್ನೂ ಸಹ ಟ್ವಿಟರ್‍ನಲ್ಲಿ ಡಾ. ಮಲ್ಲಿಕಾರ್ಜುನ್ ಖರ್ಗೆಯವರು ಹಂಚಿಕೊಂಡಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು ಈ ರೀತಿ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೇ ಇದು ನಿಜವಾ ಎಂದೂ ಸಹ ಪ್ರಶ್ನಿಸಿದ್ದಾರೆ.
ಪೂರ್ವ ಲಡಾಖ್‍ನ ಗಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ಘರ್ಷಣೆಯಲ್ಲಿ 20 ಸೈನಿಕರು ಹುತಾತ್ಮರಾಗಿದ್ದರು. ಆದರೂ ಹೊಸ ವರ್ಷದ ಮುನ್ನಾ ದಿನದಂದು ಗಾಲ್ವಾನ್ ಕಣಿವೆಯಲ್ಲಿ ತಮ್ಮ ಧ್ವಜವನ್ನು ಹಾರಿಸಿರುವುದಾಗಿ ಚೀನಾವು ದೃಶ್ಯಗಳನ್ನು ಹಂಚಿಕೊಂಡಿದ್ದರೂ ಕೇಂದ್ರ ಸರ್ಕಾರ ಮೂಕ ಪ್ರೇಕ್ಷಕನಂತೆ ಇರಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಹೆಸರನ್ನು ಹೇಳುವುದಿಲ್ಲ. ಅವರಿಗೆ ಕ್ಲೀನ್ ಚಿಟ್ ನೀಡುತ್ತಾರಾ ಎಂದು ಪ್ರಶ್ನಿಸಿ ಡಾ. ಮಲ್ಲಿಕಾರ್ಜುನ್ ಖರ್ಗೆಯವರು ಮತ್ತೊಂದು ಟ್ವಿಟ್ ಮಾಡಿದ್ದಾರೆ.



















