ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್
ಇಂಡಿ: ಕಿರಿಯರಾಗಲಿ, ಹಿರಿಯರಾಗಲಿ, ಪ್ರತಿಯೊಬ್ಬರಲ್ಲೂ ಪ್ರತಿಭೆಯನ್ನು ಭಗವಂತ ಕರುಣಿಸಿರುತ್ತಾನೆ. ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಯಿದಾ ಅನೀಸ್ ಮುಜಾವರ ಹೇಳಿದರು.
ಅವರು ಪಟ್ಟಷಣ ಭಾರಪೇಟ್ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಇವರ ಸಹಯೋಗದಲ್ಲಿ ನಡೆದ 2025- 2026 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಬಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಕ್ಕಳ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ತಂದೆ–ತಾಯಿ ಮತ್ತು ಶಿಕ್ಷಕರ ಶ್ರಮವೂ ಇದೆ. ಇಬ್ಬರೂ ಕೈ ಜೋಡಿಸಿದಾಗ ಮಾತ್ರ ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪೋಷಕರ ಪಾತ್ರವೂ ಅತಿ ಮುಖ್ಯವಾಗಿದೆ. ಮಕ್ಕಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೆಕು’ ಎಂದು ಸಲಹೆ ನೀಡಿದರು.
ಪಠ್ಯಕ್ರಮದ ಅಧ್ಯಯನ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಒಳ್ಳೆಯ ನಾಗರೀಕರಾಗಬಹುದು. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳ ಆಯೋಜನೆ ಶ್ಲಾಘನೀಯ. ಶ್ರದ್ದೆವಹಿಸಿ ಅತ್ಯುತ್ತಮ ಶಿಕ್ಷಣ ಪಡೆದು ಭವ್ಯ ಭಾರತದ ಪ್ರಜೆಗಳಾಗಿ ಎಂದು ಹಾರೈಸಿದರು.
ಶಿಕ್ಷಕರ ಸಂಘದ ಅಧ್ಯಕ್ಷರಾದ ವೈ.ಟಿ.ಪಾಟೀಲ ಮಾತನಾಡಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ದೇಶವಾಗಿದೆ’ ‘ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಪ್ರಮುಖ ಪಾತ್ರ ವಹಿಸಿದೆ. ಈ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು. ಮಕ್ಕಳು ಅತ್ಯಂತ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಖುಷಿ ತಂದಿದೆ’ ಎಂದರು.
ಸಿ.ಆರ್.ಪಿ ಪರವೇಜ್ ಪಟೇಲ್ ಮಾಡನಾಡಿ ಸ್ಥಳೀಯ ಜನಪದ ನೃತ್ಯ ಮತ್ತು ಗಾಯನ, ಚಿತ್ರಕಲೆ, ಪ್ರಬಂಧ, ಚರ್ಚಾಸ್ಪರ್ಧೆ, ಏಕಾಪಾತ್ರಾಭಿನಯ, ಸಾಮಾಜಿಕ ಮತ್ತು ಪೌರಾಣಿಕ ನಾಟಕಗಳು ಅನೇಕ ಕಲಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳು ಪ್ರತಿಭಾ ಕಾರಂಜಿ ವ್ಯಾಪ್ತಿಯಲ್ಲಿ ಬರುವುದರಿಂದ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜತೆಗೆ ವಿದ್ಯಾರ್ಥಿಗಳಲ್ಲಿ ಕಲಾಭಿರುಚಿಯ ಸಾಮರ್ಥ್ಯವನ್ನು ಸಾಬೀತು ಮಾಡಲು ಇದೊಂದು ಉತ್ತಮ ವೇದಿಕೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಇಂಡಿ ತಾಲ್ಲೂಕಿನ ಕಾರ್ಯದರ್ಶಿ ಅಲ್ತಾಫ ಬೋರಾಮಣಿ, ಇಸಿಒಗಳಾದ ಎ.ಸಿ.ಹುಣಸಗಿ, ಎ.ಓ. ಹುಗಾರ, ಮಲ್ಲು ನೇದಲಗಿ, ಉಮರ ಶೇಖ್, ಶಿಕ್ಷಕರ ಸಹಕಾರಿ ಸಂಘದ ಅಧ್ಯಕ್ಷ ಎಸ್.ವಿ.ಹರಳ್ಯಯ, ನೌಕರರ ಸಂಘದ ನಿರ್ದೇಶಕ ಎಸ್.ಆರ್.ಪಾಟೀಲ, ಸಿದ್ದು ಅರಲಗೊಂಡ, ಉರ್ದು ಶಿಕ್ಷಕರ ಸಂಘದ ಅಧ್ಯಕ್ಷ ಬಶೀರ ಇನಾಂದಾರ, ಬಾಬು ಬೇಪಾರಿ, ಮುನ್ನಾ ಬಾಗವಾನ, ಇರ್ಫಾನ್ ಮಿರಜಕರ, ಶಕೀಲ ಮಿರಜಕರ, ಜಾಕೀರ ನಾಗಠಾಣ, ಖಲಿಲ್ ಅತ್ತಾರ, ಫೈಜ್ ಖತೀಬ, ಯಾಸೀನ ತುರ್ಕಿ ಸೇರಿದಂತೆ ಅನೇಕ ಶಿಕ್ಷಕರ ಇದ್ದರು.