75ನೇ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆ
ಹನೂರು: ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷ ಜನವರಿ 26ರಂದು ಆಚರಿಸಲಾಗುವ ದಿನಾಚರಣೆಯಾಗಿದೆ. ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26 1950 ರಂದು ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಈ ಜನವರಿ 26 ಕ್ಕೆ ಸಂವಿಧಾನ ರಚನೆಯಾಗಿ 75 ವರ್ಷವಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದ ಆವರಣದಲ್ಲಿ 75 ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯನ್ನು ಶಾಸಕರ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು.
ಶಾಸಕರಾದ ಎಂಆರ್ ಮಂಜುನಾಥ್ ಅವರು ಮಾತನಾಡಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಬಹಳ ಸಡಗರದಿಂದ ಆಚರಣೆ ಮಾಡಬೇಕು. ಈ ಜನವರಿ 26ಕ್ಕೆ ಸಂವಿಧಾನ ರಚನೆಯಾಗಿ 75 ವರ್ಷ ಕಳೆದಿದ್ದು ಉತ್ತಮ ರೀತಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಇಲಾಖೆಗಳು ಒಂದೊಂದು ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದು ತಿಳಿಸಿದರು.
ದೈಹಿಕ ಶಿಕ್ಷಕರಾದ ಮಹದೇವ್ ಮಾತನಾಡಿ ಶಾಲೆಯ ವಿದ್ಯಾರ್ಥಿಗಳಿಂದ ಪತಸಂಚಲನೆ, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸ್ಕೌಟ್ ಅಂಡ್ ಗೈಡ್ಸ್ ಯಿಂದ ಪೆರೈಟ್ ಕಾರ್ಯಕ್ರಮ ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ವೈ ಕೆ ಗುರುಪ್ರಸಾದ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ, ತಾಲೂಕು ಪಂಚಾಯಿತಿ ಇಒ ಉಮೇಶ್, ಪಸುವೈದ್ಯಾಧಿಕಾರಿ ಡಾ. ಸಿದ್ದೇಶ್,ಎಇಇ ಶಂಕರ್,
ಎ ಎಸ್ ಐ ಶಿವಕುಮಾರ್, ಇನ್ನು ಮುಂತಾದ ಅಧಿಕಾರಿ ವೃಂದದವರು ಹಾಜರಿದ್ದರು.