79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ
ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ
ಹನೂರು : ಪಟ್ಟಣ ಶ್ರೀ ಮಹದೇಶ್ವರ ಕ್ರಿಡಾಂಗಣದಲ್ಲಿ ಆಗಸ್ಟ್ 15 ರಂದು ನಡೆಯುವ 79 ನೇ ವರ್ಷದ ಸ್ವಾತಂತ್ರ್ಯೊತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷ ಆಗದಂತೆ ಅಚ್ಚುಕಟ್ಟಾಗಿ ಆಯಾ ಇಲಾಖೆ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿ ಆಗಬೇಕು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕರೆದಿದ್ದ ಸ್ವಾತಂತ್ರೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಮುಖ್ಯವಾಗಿ ಅರಣ್ಯ ಇಲಾಖೆ ಮೂರು ವಿಭಾಗಗಳ ಹಿರಿಯ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮಗೆ ವಹಿಸಿರುವ ಜಾವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಯಾವುದೇ ಲೋಪಗಳು ಆಗದಂತೆ ಮುಂಜಾಗೃತಾ ಕ್ರಮ ದೊಂದಿಗೆ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮ ಘನತೆಯಿಂದ ಅದ್ದೂರಿಯಾಗಿ ಸಾಕಾರಗೊಳ್ಳಬೇಕು.
ಪಟ್ಟಣ ಪಂಚಾಯ್ತಿ ವತಿಯಿಂದ ತಮ್ಮ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಜೊತೆಗೆ ಕುಡಿಯುವ ನೀರಿನ ಸೌಲಭ್ಯ ಸಮರ್ಪಕವಾಗಿ ಒದಗಿಸಬೇಕು. ಕಾರ್ಯಕ್ರಮದ ಹಿಂದಿನ ದಿನದಿಂದಲೆ ಪಟ್ಟಣ ಮುಖ್ಯರಸ್ತೆ ಸೇರಿದಂತೆ ಎಲ್ಲಾ ಸರ್ಕಾರಿ ಕಛೇರಿಗಳು ಶಾಲಾ ಕಾಲೇಜು ಖಾಸಗಿ ಕಟ್ಟಡ ಗಳಲ್ಲಿ ವಿದ್ಯುತ್ ದೀಪ ಅಲಂಕಾರವನ್ನು ಆಯಾ ಇಲಾಖೆ ಅವರೆ ಮಾಡುವ ಮೂಲಕ ಅಂದು ಹಬ್ಬದ ವಾತಾವರಣ ಇರಬೇಕು.
ಪಟ್ಟಣ ವ್ಯಾಪ್ತಿಯ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ಕಾರ್ಯಕ್ರಮಕ್ಕೆ ಬರುವಂತ ಮಕ್ಕಳಿಗೆ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕುಡಿಯುವ ನೀರು ಶೌಚಾಲಯ ಜೊತೆಗೆ ಹೆಚ್ಚುವರಿ ತಾತ್ಕಾಲಿಕ ಕುಡಿಯುವ ನೀರು ಶೌಚಾಲಯ ನೆರಳಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಆನಂದ್ ಕುಮಾರ್, ಪಟ್ಟಣ ಪಂಚಾಯಿತಿ ಸದಸ್ಯರಾದ,
ಮಹೇಶ್,ಸೋಮಶೇಖರ್,ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾದ ರಾಚಪ್ಪ,ತಹಶೀಲ್ದಾರ್ ಚೈತ್ರ, ಬಿಇಒ ಗುರುಲಿಂಗಯ್ಯ,ಇಓ ಉಮೇಶ್, ತಾಲ್ಲೂಕು ತಾಲ್ಲೂಕು ಆರೋಗ್ಯ ಅಧಿಕಾರಿ ಪ್ರಕಾಶ್ ,ಜಿಲ್ಲಾ ಪಂಚಾಯತ್ ಎಇಇ ಕುಮಾರ್,ಪೋಲಿಸ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿ, ಉಪನೋಂದಣಾಧಿಕಾರಿ ಉಷಾ,ನೀರಾವರಿ ಇಲಾಖೆ ಎಇಇ ಕರುಣಾಮಯಿ,ಸಿಡಿಪಿಓ ಅಂಬಿಕಾ,ಚೆಸ್ಕಾಂ ಎಇಇ ರಂಗಸ್ವಾಮಿ,ಹಾಗೂ ಇನ್ನಿತರರು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.