Voice Of Janata : ಹಾವೇರಿ : ಜಿಲ್ಲೆಯಲ್ಲಿ- ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಎಲ್ಲ ತಹಶೀಲ್ದಾರಗಳಿಗೆ ಜಿಲ್ಲಾ ಉಸ್ತುವಾರಿ | ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರ ‘ಪಟ್ಟಿ ವೀಕ್ಷಕರಾದ ಡಾ.ವಿಶಾಲ್ ಆರ್. ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ 2024ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಕುರಿತಾಗಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮಹಿಳಾ ಮತದಾರರ ಪ್ರಮಾಣ ಕಡಿಮೆ ಇದೆ. ಯಾವ ಪ್ರದೇಶದಲ್ಲಿ ಮಹಿಳಾ ಮತದಾರರ ನೋಂದಣಿ ಕಡಿಮೆ ಇದೆ ಎಂದು ಪರಿಶೀಲಿಸಿ, ನೋಂದಣಿಗೆ ಕ್ರಮವಹಿಸಲು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿಗಳಾದ ಚೆನ್ನಪ್ಪ ಹಾಗೂ ಮಹ್ಮದ ಖಿಜರ್ ಹಾಗೂ ತಹಶೀಲ್ದಾರಗಳು ಉಪಸ್ಥಿತರಿದ್ದರು.