ವಿಜಯಪುರ: ದೈನಂದಿನ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಇಂದು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.
ದೈನಂದಿನ ಬಳಕೆಗಳಾದ ಗ್ಯಾಸ್, ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೇರುತ್ತಿರುವುದು ಖಂಡನೀಯ ಎಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದಿನನಿತ್ಯ ಬೆಲೆ ಏರಿಕೆಯಿಂದ ಬಡವರ ಬದುಕು ಬೀದಿಗೆ ಬರುತ್ತಿದೆ. ಅದಕ್ಕಾಗಿ ತಕ್ಷಣವೇ ಬೆಲೆ ಏರಿಕೆಯನ್ನು ಸರ್ಕಾರಗಳು ಇಳಿಕೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.