ರಾಯಚೂರು : ಜನಮಿತ್ರ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಸಂಸ್ಥೆ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ರವರ 131ನೇ ಜನ್ಮ ದಿನಾಚರಣೆ ಅಂಗವಾಗಿ ಹಾಡುವ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ಏ.24 ರಂದು ನಗರದ ಕನ್ನಡ ಭವದಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಪಲ್ಲವಿ ಕೋಸಗಿ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,ಕಾರ್ಯಕ್ರಮವನ್ನು ಕೃಷಿ ವಿಶ್ವ ವಿದ್ಯಾಲಯ ಆಡಳಿತಾಧಿಕಾರಿ ಡಾ.ಜಾಗೃತಿ ದೇಶಮಾನೆ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಜನಮಿತ್ರ ಸಂಸ್ಥೆ ಅಧ್ಯಕ್ಷ ಈರಣ್ಣ ಕೋಸಗಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರಿಮ್ಸ್ ಪ್ರಾಧ್ಯಾಪಕ ಡಾ.ಪ್ರೇಮ್ ಸಾಗರ್ ವಾಗೈರೆ, ಕೆನರಾ ಬ್ಯಾಂಕ್ ರಾಯಚೂರು ವಿಭಾಗೀಯ ವ್ಯವಸ್ಥಾಪಕ ಕೆ.ಎಸ್ ಶಿವಮೂರ್ತಿ,ಸಂಗೀತ ಕಲಾವಿದ ಲಕ್ಷ್ಮಿ ರೆಡ್ಡಿ ಹೊಸೂರು,ಪ್ರಗತಿಪರ ಚಿಂತಕ ಎಂ.ಆರ್. ಬೇರಿ, ಟಿಯುಸಿಐ ಜಿಲ್ಲಾಧ್ಯಕ್ಷ ಜಿ ಅಮರೇಶ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸೈಯದ್ ನಜುರುದ್ದಿನ್, ಈರಣ್ಣ ಕೋಸಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.