ಚೆಸ್ಕಾಂ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ..!
ಪಟ್ಟಣದಲ್ಲಿ ಚೆಸ್ಕಾಂ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಚಳುವಳಿ ಸತ್ಯಾಗ್ರಹ..
ಹನೂರು : ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ರೈತರ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಚೆಸ್ಕಂ ಕಚೇರಿಯ ಮುಂದೆ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಚಳುವಳಿ ಸತ್ಯಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು.
ರಾಜ್ಯ ಸರ್ಕಾರಗಳು ರೈತರಿಗೆ ಹಲವಾರು ವಿಷಯಗಳಲ್ಲಿ ಅನ್ಯಾಯ ಮಾಡುತ್ತೇವೆ. ಅದರಲ್ಲಿ ಮುಖ್ಯವಾಗಿ ರೈತರಿಗೆ ವಿದ್ಯುತ್ ಸರಬರಾಜು ವಿಷಯದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಹನೂರು ತಾಲೂಕು ಅತಿ ಹೆಚ್ಚು ಕಾಡಂಚಿನ ಭಾಗ ಹೊಂದಿದ್ದು, ರಾತ್ರಿ ವೇಳೆ ಯಾವ ಪ್ರಾಣಿಗಳು ಯಾವ ಸಮಯದಲ್ಲಿ ರೈತರ ಮೇಲೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಜೀವನ ಸಾಗಿಸುವ ಪರಿಸ್ಥಿತಿ ಉಂಟಾಗಿದೆ. ಯಾವುದೇ ನದಿ ಮೂಲಗಳಿಲ್ಲದ ಇಲ್ಲಿನ ರೈತರು ತಾವು ಪಸಲು ಬೆಳೆಯಲು ತೆರೆದ ಬಾವಿಗಳು ಹಾಗೂ ಕೊಳವೆ ಬಾವಿಗಳನ್ನು ಅವಲಂಬಿಸಿದ್ದಾರೆ. ಇವುಗಳಿಂದ ನೀರು ಎತ್ತಲು ವಿದ್ಯುತ್ ಮೋಟಾರಗಳನ್ನು ಅಳವಡಸಿಕೊಂಡಿರುತ್ತಾರೆ.
ಆದರೆ ಚೆಸ್ಕಾಂ ಇಲಾಖೆ ಸರಿಯಾದ ಸಮಯಕ್ಕೆ ವಿದ್ಯುತ್ ಸರಬರಾಜುನ್ನು ಮಾಡದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಆದ್ದರಿಂದ ಸರ್ಕಾರ ಇನ್ನು ಮುಂದಾದರು ಹಗಲು ವೇಳೆ 7 ಗಂಟೆ 3 ಪ್ರೆಸ್ ವಿದ್ಯುತ್ ಸರಬರಾಜು ಮಾಡಬೇಕು ಎಂದು ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ರೈತ ಸಂಘ ಹನೂರು ತಾಲೂಕು ಸಮಿತಿಯ ಅಧ್ಯಕ್ಷ ಗೌಡೇ ಗೌಡ ತಿಳಿಸಿದರು.
ಆಗಸ್ಟ್ 28 ಸೋಮವಾರದಂದು 10:30 ಗಂಟೆಗೆ ಹನೂರು ಪಟ್ಟಣದ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಬಂಕ್ ನಿಂದ ಪ್ರತಿಭಟನೆ ಪ್ರಾರಂಭಿಸಿ ಮೆರವಣಿಗೆಯ ಮೂಲಕ ಚೆಸ್ಕಾಂ ವಿರುದ್ಧ ಘೋಷಣೆಯನ್ನು ಕೂಗುತ್ತಾ ಖಾಸಗಿ ಬಸ್ ನಿಲ್ದಾಣದಲ್ಲಿ ಮಾನವ ಸರಪಣಿ ನಿರ್ಮಿಸಿ ಸರ್ಕಾರದ ವಿರುದ್ಧ ಹಾಗೂ ಚಸ್ಕಾಂ ವಿರುದ್ಧ ಘೋಷಣೆಯನ್ನು ಕೂಗಿದರು. ನಂತರ ಚೆಸ್ಕಾಂ ಕಚೇರಿಯ ಮುಂಭಾಗ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿ ರೈತರ ಪಂಪ್ ಸೆಟ್ ಗಳಿಗೆ ನಿಗದಿತ ಪ್ರಮಾಣದಲ್ಲಿ ವಿದ್ಯುತ್ ಪೂರೈಕೆ ಮಾಡದೆ ಲೋಡ್ ಶೆಡ್ಡಿಂಗ್ ನೆಪದಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಳಿಸುವುದರ ಮೂಲಕ ರೈತರಿಗೆ ನಿರಂತರವಾಗಿ ತೊಂದರೆ ಕೊಡುತ್ತಿದ್ದ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಹಾಗೂ ಅನಿರ್ದಿಷ್ಟಾವಧಿ ಚಳುವಳಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಈ ಸಮಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹನೂರು ತಾಲೂಕು ಸಮಿತಿಯ ನೂರಾರು ರೈತರುಗಳು ಹಾಜರಿದ್ದರು.