ಇಂಡಿ :ಚೆಕ್ ಬೌನ್ಸ್ ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಶಿಕ್ಷಣ ಸಚಿವ ಮಧುಬಂಗಾರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಕಾರ್ಯದರ್ಶಿ ಸಚಿನ ದಾನಗೊಂಡ ಹಾಗೂ ನೂರಾರು ಕಾರ್ಯಕರ್ತರು ಸೇರಿ ತಹಶಿಲ್ದಾರ ಬಿ ಎಸ್ ಕಡಕಬಾವಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಪಟ್ಟಣಸ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಎಬಿವಿಪಿ ಕಾರ್ಯಕರ್ತರು ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕೆಯಾಗಿರುವ ಸಚಿವ ಮಧು ಬಂಗಾರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಪ್ರತಿಭಟಿಸಿದರು.
ಇನ್ನೂ ಇದೇ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಸಚಿನ ಧಾನಗೊಂಡ ಮಾತಾನಾಡಿದ ಅವರು, ಶಿಕ್ಷಣವೆಂದರೆ ‘ಮಾನವೀಯತೆಯ ವಿಕಾಸ, ಮನುಷ್ಯರಲ್ಲಿ ಪರಿಪುರ್ಣತೆಯನ್ನು ತುಂಬುವುದೇ ಶಿಕ್ಷಣ. ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಹೊರ ಬರುತ್ತದೆ ಎಂದು ವಿವೇಕಾನಂದರು ಹೇಳುತ್ತಿದ್ದರು, ‘ಭಾರತದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣ ಒಂದೇ ಪರಿಹಾರ’ ಎಂದು `ನಂಬಿದ್ದರು ಆದರೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಜನಪ್ರತಿನಿಧಿ – ಗಳ ನ್ಯಾಯಾಲಯ ಶಿಕ್ಷೆ ವಿಧಿಸಿದ್ದರು ಸಹಿತ ರಾಜ್ಯದ ಸರ್ಕಾರದ ಮಂತ್ರಿಗಳಾಗಿ ಮುಂದುವರೆದಿರುವುದು ವಿಷಾದನೀಯ ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಎಂದು ಹೇಳಿದರು.
ಖಾಸಗಿ ಆಡಿಯೋ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಧು ಬಂಗಾರಪ್ಪ 2011 ರಲ್ಲಿ ರಾಜೇಶ ಎಕ್ಸಪೋರ್ಟ್ ಸಂಸ್ಥೆಗೆ 6.6 ಕೋಟಿ ರೂ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆಗಿತ್ತು ಈ ಹಿನ್ನಲೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ದೂರು ದಾಖಲಿಸಿತ್ತು ಈ ನಡುವೆ ಮಧು ಬಂಗಾರಪ್ಪಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 6.96 ಕೋಟಿ ರೂ ದಂಡ ವಿಧಿಸಿದ್ದು, ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾನ ಅನುಭವಿಸಲು ನ್ಯಾಯಾಲಯ ಆದೇಶಿಸಿದೆ. ಈ ರೀತಿ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿಯು ರಾಜ್ಯದ ಶಿಕ್ಷಣ ಇಲಾಖೆಗೆ ಕಪ್ಪು ಚುಕ್ಕೆ, ಇವರು ಈ ಇಲಾಖೆಯನ್ನು ಹೇಗೆ ನಿಭಾಯಿಸಲು ಸಾಧ್ಯ? ತಕ್ಷಣವೇ ರಾಜ್ಯದ ಮುಖ್ಯಮಂತ್ರಿಗಳು ಅವರ ರಾಜೀನಾಮೆ ಪಡೆಯಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಶಾಲ ಶಿಂದೆ, ಸಮರ್ಥ ಗಾಯಕವಾಡ, ಮಂಜುನಾಥ್ ಅಚ್ಚೆಗಾರ, ರೇವಣಸಿದ್ದ ರೂಗಿ, ಅಂಬಣ್ಣ ಪೂಜಾರಿ, ಸಿದ್ದರಾಮ ನಾಯ್ಕೊಡಿ, ಪರಮೇಶ್ವರ ಮುದೋಳ, ಚಂದ್ರಕಾಂತ ತೋಳನೂರ, ಅಭಿಜೀತ ಬಿರಾದಾರ, ಸೌಂದರ್ಯ ತಳವಾರ, ಭಾಗ್ಯಶ್ರೀ ವಾಲಿಕಾರ, ಶಮೀನಾ ಇನಾಮದಾರ,ಸುಗಂಧ ಚಾಬುಕಸವಾರ, ದೀಪಾ ಗಿರಣಿವಡ್ಡರ್, ಗಂಗೂಬಾಯಿ ವಾಲಿ ಇನ್ನೂ ಅನೇಕ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.