ಜಿಜಾಬ್ ವಿರೋಧಿಸಿ ಪ್ರತಿಭಟನೆ : ಕಾಲೇಜು ವಿಧ್ಯಾರ್ಥಿಗಳಿಗೆ ಕೆಸರಿ ಶಾಲು ವಿತರಿಸಿದ ಶಾಸಕ ಬಸನಗೌಡ ಪಾಟೀಲ
ವಿಜಯಪುರ: ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದ ಕರ್ನಾಟಕ ಸರ್ಕಾರದ ಹೊಸ ಆದೇಶವನ್ನು ವಿರೋಧಿಸಿ ಶುಕ್ರವಾರ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದರು.
ಶಾಲಾ, ಕಾಲೇಜುಗಳಲ್ಲಿ ಹಿಜಾಬ್‌ಗೆ ಅನುಮತಿ ನೀಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಯತ್ನಾಳ್ ಮತ್ತು ಅವರ ಬೆಂಬಲಿಗರು, ಇಂದು ನಗರದ ದರ್ಬಾರ್ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ನಂತರ ಅವರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಯತ್ನಾಳ್ ತಮ್ಮ ಬೆಂಬಲಿಗರೊಂದಿಗೆ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ದರ್ಬಾರ್ ಶಿಕ್ಷಣ ಸಂಸ್ಥೆಯ ಆವರಣ ತಲುಪಿದ ನಂತರ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು.


















