ಜಮಖಂಡಿ : ಆ ಸಮುದಾಯದ ಜನರು ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಲು ನಾಡ ಕಚೇರಿಗೆ ಹೋಗಿದ್ದರು. ಆದರೆ ಅಲ್ಲಿನ ಅಧಿಕಾರಿಗಳು ಅರ್ಜಿಯನ್ನು ಸ್ವೀಕರಸದೇ ಬೇಜವ್ದಾರಿ ತೋರಿದ್ದಕ್ಕೆ ಅಧಿಕಾರಿಗಳ ವಿರುದ್ದ ಅರ್ಜಿದಾರರು ದಿಧೀರ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
ತಳವಾರ ಸಮುದಾಯ ಜನರು ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಪಡೆಯಲು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ನಾಡ ಕಚೇರಿಯ ಸಿಬ್ಬಂದಿಗಳ ಬಳಿ ಅರ್ಜಿ ಸಲ್ಲಿಸಲು ಮುಂದಾಗಿದ್ದರು. ಅಲ್ಲಿನ ಅಧಿಕಾರಿಗಳು ಅರ್ಜಿ ಸ್ವೀಕರಿಸಲು ಮುಂದಾಗದಿದ್ದಕ್ಕೆ ಅಧಿಕಾರಿಗಳ ವಿರುದ್ದ ತಳವಾರ ಸಮುದಾಯದ ಜನ್ರು ನಾಡ ಕಛೇರಿಯ ಕಾರ್ಯಲಯದಲ್ಲಿ ಪ್ರತಿಭಟನೆ ನಡೆಸಿದರು. ಧರಣಿ ಕಾವು ಏರುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಅರ್ಜಿಯನ್ನು ಸ್ವೀಕರಿದ್ದಾರೆ. ಇತ್ತ ಅರ್ಜಿ ಸಲ್ಲಿಸಿದ ಸಮುದಾಯದ ಜನರು ಅಧಿಕಾರಿಗಳ ನಡೆಗೆ ಬೇಸರ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದರು.