ಅ.16 ರಂದು ಕಾಂಗ್ರೆಸ್ ವಿರುದ್ದ ಇಂಡಿಯಲ್ಲಿ ಬೃಹತ್ ಪ್ರತಿಭಟನೆ
ಇಂಡಿ: ಅಂಬಿಕಾ ಪತಿ ಎಂಬ ಕಾಂಟ್ರಾಕ್ಟರ್ ಮನೆಯಲ್ಲಿ 42 ಕೋಟಿ ನಗದು ಹಣ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದು, ರೈತರಿಗೆ ಸಮರ್ಪಕ ವಿದ್ಯುತ್ ಕೊಡದಿರುವುದು, ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಪರಿಹಾರ ಕೊಡದಿರುವುದು ಸೇರಿದಂತೆ ಅನೇಕ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ಅ.16 ಬೆಳಗ್ಗೆ 10 ಗಂಟೆಗೆ ಇಂಡಿ ನಗರದ ಬಸವೇಶ್ವರ ವೃತ್ತದಲ್ಲಿ ಎಟಿಎಂ ಕಾಂಗ್ರೆಸ್ ದುರಾಡಳಿತ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿ ದ್ದು ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಇಂಡಿ ಮಂಡಲದ ಎಲ್ಲ ಮುಖಂಡರು ರೈತರು ಚುನಾಯಿತ ಪ್ರತಿನಿಧಿಗಳು ಎಲ್ಲ ಪದಾಧಿಕಾರಿಗಳು ಸಮಸ್ತ ಕಾರ್ಯಕರ್ತರುಗಳು, ಬಂಧುಗಳು ಭಾಗವಹಿಸುವ ಮೂಲಕ ಪ್ರತಿಭಟನೆ ಯಶಸ್ವಿಗೊಳಿಸಬೇಕೆಂದು ವಿನಂತಿಸಿದ್ದಾರೆ.