ಜಿಲ್ಲೆಯಲ್ಲಿರುವ ಇಟ್ಟಂಗಿ ಭಟ್ಟಿಗಳ ಮಾಹಿತಿ ಒದಗಿಸಿ : ಡಿಸಿ ಟಿ ಭೂಬಾಲನ್
ವಿಜಯಪುರ: ಜಿಲ್ಲೆಯಲ್ಲಿರುವ ಪ್ರತಿಯೊಂದು ಇಟ್ಟಂಗಿ ಭಟ್ಟಿಗಳ ಮಾಹಿತಿ ಒದಗಿಸುವಂತೆ Obviously ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ಕಾರ್ಮಿಕರ ಕಲ್ಯಾಣ ಮತ್ತು ಹಕ್ಕುಗಳ ರಕ್ಷಣೆ ಕುರಿತು ಗುರುವಾರ ಬೆಳಿಗ್ಗೆ 9.30ಕ್ಕೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಇತ್ತೀಚೆಗೆ ನಡೆದ ಇಟ್ಟಂಗಿ ಬಟ್ಟೆಯಲ್ಲಿ ಕಾರ್ಮಿಕರಿಗೆ ಹಲ್ಲೆ ಮಾಡಿದ ಘಟನೆ ಕುರಿತು ಜಂಟಿ ತಪಾಸಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಸಮಿತಿಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವೃತ್ತ ಆರಕ್ಷಕ ನಿರೀಕ್ಷಿಕರು, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಮುಖ್ಯ ಅಧಿಕಾರಿಗಳು/ ಪಟ್ಟಣ ಪಂಚಾಯತಿ ಸದಸ್ಯರನೊಳಗೊಂಡು ಕಾರ್ಮಿಕ ನಿರೀಕ್ಷಕರು ಸದಸ್ಯ ಕಾರ್ಯದರ್ಶಿಗಳಾಗಿ ಕರ್ತವ್ಯ ನಿರ್ವಹಿಸುವಂತೆ ಅವರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಗ ಗೆಣ್ಣೂರ, ಉಪ ವಿಭಾಗಾಧಿಕಾ- ಗುರುನಾಥ ದಡ್ಡಿ, ಅಬೀದ್ ಗದ್ಯಾಳ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಡಾ. ಸಂತೋಷ ಗೂಣ್ಣಾರಿ, ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಕಾರ್ಮಿಕ ಕಲ್ಯಾಣ ಅಧಿಕಾರಿ ಉಮಾ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಮುಖ್ಯಾಧಿಖಾರಿಗಳು, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕಾಧಿಕಾರಿ ತಾಲೂಕಿನ ಮುಖ್ಯಾಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಉಪಸ್ಥಿತರಿದ್ದರು.


















