ಪರೀಕ್ಷಾ ಕೇಂದ್ರದೊಳಗೆ ಈ ನಿಯಮ ಪಾಲನೆ ಕಡ್ಡಾಯ
Voiceofjanata DesK News
ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು
ಸಂಪೂರ್ಣವಾಗಿ ನಿಷೇಧಿಸಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಥಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಉಚಿತ ಪ್ರಯಾಣ
ಗ್ರಾಮೀಣ ಪ್ರದೇಶ ಮತ್ತು ಇತರೆ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳು ಪ್ರವೇಶ ಪತ್ರವನ್ನು ತೋರಿಸಿ ಉಚಿತ ಪ್ರಯಾಣ ಮಾಡಲು ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್‌ಆರ್ಟಿಸಿ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ.


















